ಎಸ್ಟಿಎಫ್- ಗಡಿಭದ್ರತಾ ಪಡೆ ನಡುವೆ ವೈಮನಸ್ಸಿಲ್ಲ: ರಾಜಗೋಪಾಲನ್
ಚೆನ್ನೈ: ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಎಸ್ಟಿಎಫ್ ಹಾಗೂ ಗಡಿಭದ್ರತಾ ಪಡೆಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎನ್ನುವ ವರದಿಗಳನ್ನು ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕ ಆರ್. ರಾಜಗೋಪಾಲನ್ ನಿರಾಕರಿಸಿದ್ದಾರೆ. ವೈಮನಸ್ಯದ ವದಂತಿಗಳೆಲ್ಲಾ ಕಟ್ಟು ಕಥೆ ಎಂದು ಅವರು ಹೇಳಿದ್ದಾರೆ.
ವೀರಪ್ಪನ್ ಶಿಕಾರಿ ಕಾರ್ಯಾಚರಣೆ ಆಶಾದಾಯಕವಾಗಿ ಸಾಗುತ್ತಿದೆ ಎಂದು ಶಿಕಾರಿ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಹೇಳಿದರು. ಎಸ್ಟಿಎಫ್ ಹಾಗೂ ಗಡಿ ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಡಿ ಭದ್ರತಾ ಪಡೆ ಪ್ರತ್ಯೇಕ ಕಾರ್ಯಾಚರಣೆ ನಡೆಸುತ್ತಿದೆ ಎನ್ನುವುದು ಶುದ್ಧ ಸುಳ್ಳು ಎಂದು ರಾಜಗೋಪಾಲನ್ ಸ್ಪಷ್ಟಪಡಿಸಿದರು.
ವೀರಪ್ಪನ್ ಇನ್ನೂ ಕಾಡಿನಲ್ಲಿಯೇ ಇದ್ದಾನೆ ಎನ್ನುವುದನ್ನು ಒತ್ತಿ ಹೇಳಿದ ಅವರು, ಈ ಸಾರಿ ವೀರಪ್ಪನ್ ಶಿಕಾರಿಯಲ್ಲಿ ಯಶಸ್ವಿಯಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಕಾರ್ಯಾಚರಣೆಯ ಬಗೆಗಿನ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications