ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ವಿಕಲಾಂಗರಿಗೆ ಉದ್ಯೋಗಾವಕಾಶ : ಕೃಷ್ಣ

By Staff
|
Google Oneindia Kannada News

ಬೆಂಗಳೂರು : ಇನ್ನು ಮುಂದೆ ದೈಹಿಕ ಅಂಗವಿಕತೆ ಉಳ್ಳವರಿಗೆ ಅನುಕೂಲ ಆಗುವ ರೀತಿಯಲ್ಲಿ ಸಾರ್ವಜನಿಕ ಕಟ್ಟಡಗಳನ್ನು ವಿನ್ಯಾಸಗೊಳಿಸಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಬುಧವಾರ ಇಲ್ಲಿ ತಿಳಿಸಿದರು.

ಸಾರ್ವಜನಿಕ ಕಟ್ಟಡಗಳಾದ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಲ್ಲಿ ಮೆಟ್ಟಿಲುಗಳ ಪಕ್ಕದಲ್ಲಿ ಇಳಿಜಾರು, ಶೌಚಾಲಯಗಳಲ್ಲಿ ಕಮೋಡ್‌ಗಳನ್ನು ಅಳವಡಿಸಲಾಗುವುದು, ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವ ಮುನ್ನ ಈ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬ ನಿರ್ಬಂಧ ಹಾಕಲಾಗುವುದು ಎಂದರು. ಹಾಲಿ ಕಾಯಿದೆಯಲ್ಲೇ ಅಂಗವಿಕಲರಿಗೆ ಅನುಕೂಲವಾಗುವ ರೀತಿಯಲ್ಲಿ ಸಾರ್ವಜನಿಕ ಕಟ್ಟಡಗಳು ಇರಬೇಕು ಎಂಬ ನಿಯಮ ಇದೆ. ಆದರೆ, ಅದು ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂದೂ ಕೃಷ್ಣ ವಿಷಾದಿಸಿದರು.

ಐಟಿ ಕ್ಷೇತ್ರದಲ್ಲಿ ಮೀಸಲು: ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಅಂಗವಿಕಲರಿಗೆ ಉದ್ಯೋಗಾವಕಾಶಗಳನ್ನು ನೀಡುವ ಕುರಿತಂತೆ ಬುಧವಾರ ನಡೆದ ದುಂಡು ಮೇಜಿನ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಈ ವಿಷಯ ತಿಳಿಸಿದರು.

ಐ.ಟಿ. ಕ್ಷೇತ್ರದಲ್ಲಿ ನಾಗಾಲೋಟದಲ್ಲಿ ಸಾಗುತ್ತಿರುವ ರಾಜ್ಯದಲ್ಲಿ ಅಂಗವಿಕಲರಿಗೂ ಅವಕಾಶ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಮೈಸೂರು, ಬೆಂಗಳೂರು ಸೇರಿದಂತೆ ಆರು ಶಾಲೆಗಳಲ್ಲಿ ಅಂಗವಿಕಲರಿಗೆ ಕಂಪ್ಯೂಟರ್‌ ತರಬೇತಿ ನೀಡಲು ರೋಟರಿ ಸಂಸ್ಥೆ ಮುಂದೆ ಬಂದಿದೆ ಎಂದು ತಿಳಿಸಿದರು.

ಐ.ಟಿ ಕ್ಷೇತ್ರ ಸೇರಿದಂತೆ ಸರ್ಕಾರಿ ಉದ್ಯೋಗದಲ್ಲಿ ಅಂಗವಿಕಲರಿಗೆ ಶೇ. 3ರಷ್ಟು ಮೀಸಲಾತಿ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು. ಈ ಸಂದರ್ಭದಲ್ಲಿ ಹಾಜರಿದ್ದ ಮಾಹಿತಿ ತಂತ್ರಜ್ಞಾನದ ಕಾರ್ಯದರ್ಶಿ ವಿವೇಕ್‌ ಕುಲಕರ್ಣಿ ಅವರು, ಅಂಗವಿಕಲರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಬೆಂಗಳೂರಿನ 70ಕ್ಕೂ ಹೆಚ್ಚು ಸಂಸ್ಥೆಗಳಿಗೆ ರಾಜ್ಯದ ವಿವಿಧ ಕಂಪ್ಯೂಟರ್‌ ಕಂಪನಿಗಳಿಂದ ಕಂಪ್ಯೂಟರ್‌ ಒದಗಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮತ್ತು ಮಾಹಿತಿ ತಂತ್ರಜ್ಞಾನ ವಲಯ ಮತ್ತು ಕಾರ್ಪೊರೇಟ್‌ ವಲಯದಲ್ಲಿ ಕೂಡ ಅಂಗವಿಕಲರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಸಂಬಂಧ ದುಂಡು ಮೇಜಿನ ಪರಿಷತ್ತಿನಲ್ಲಿ ಚರ್ಚಿಸಲಾಯಿತು ಎಂದು ಅಂಗವಿಕಲರಿಗೆ ಉದ್ಯೋಗ ಉತ್ತೇಜನದ ರಾಷ್ಟೀಯ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಜಾವೆದ್‌ ಅಬಿದಿ ತಿಳಿಸಿದರು. ಈ ಸಂಬಂಧ ಮಾಹಿತಿ ಬ್ಯಾಂಕ್‌ ಸ್ಥಾಪಿಸಲಾಗುವುದೆಂದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X