ಜನವರಿ 20, 21ಕ್ಕೆ ಬಂಟರ ಕಲೋತ್ಸವ ನೋಡ ಬನ್ನಿ
ಮಂಗಳೂರು : ಸಿರಿ, ದೇವುಪೂಂಜ, ಅಗೋಳಿ ಮಂಜಣ್ಣ ಮತ್ತು ಬ್ಯಾಂಕಿಂಗ್‌ಗೆ ಹೊಸ ಆಯಾಮ ಕೊಟ್ಟ ಮುಲ್ಕಿ ಸುಂದರರಾಮ ಶೆಟ್ಟಿ ಇವರೆಲ್ಲರ ಸಾಧನೆ ಸ್ಮರಿಸುವ ವೇದಿಕೆಗಳು ಇವರ ಹೆಸರುಗಳಲ್ಲೇ ಸಜ್ಜಾಗಿವೆ. ಜಗತ್ತಿನ ವಿವಿಧೆಡೆಗಳಲ್ಲಿ ತಮ್ಮ ಛಾತಿ, ಕಸುಬು ಮೆರೆಯುತ್ತಿರುವ ದಕ್ಷಿಣ ಕನ್ನಡದ ಪ್ರಮುಖ ಸಮುದಾಯ ‘ಬಂಟ’ ತನ್ನ ಸಂಸ್ಕೃತಿಯನ್ನು ಹಂಚಲು ಜನವರಿ 20 ಹಾಗೂ 21ರಂದು ಕಲಾ ಉತ್ಸವ ಆಯೋಜಿಸಿದೆ. ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಉತ್ಸವದ ಮುಖ್ಯ ಅತಿಥಿಗಳಲ್ಲೊಬ್ಬರು.
ಬಂಟರ ಜೀವನ ಕ್ರಮ, ಅಭಿರುಚಿ, ಸಾಂಸ್ಕೃತಿಕ ನೆಲೆಗಟ್ಟನ್ನು ಪರಿಚಯಿಸಲು ಈ ಉತ್ಸವ ಹಮ್ಮಿಕೊಂಡಿ-ದ್ದು, ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ವಿನಯ ಹೆಗಡೆ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಬಂಟರ ಆ ಕಾಲದ ಅವಿಭಕ್ತ ಕುಟುಂಬಗಳ ಸಾಂಸ್ಕೃತಿಕ, ಸಾಹಿತ್ಯಿಕ, ಕಲಾತ್ಮಕ ಹಾಗೂ ಭಾವನಾತ್ಮಕ ಜೀವನವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದಿಶ್ಯ ಉತ್ಸವದ್ದು ಎಂದು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎ.ದೇವಾನಂದ ಶೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಧಾಬಿಯಾ ನ್ಯೂ ಮೆಡಿಕಲ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಶೆಟ್ಟಿ, ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ.ಸತೀಶಚಂದ್ರ ಹೆಗಡೆ ಹಾಗೂ ಸುರತ್ಕಲ್ ಶಾಸಕ ಕೆ.ವಿಜಯಕುಮಾರ್ ಶೆಟ್ಟಿ , ಜಿಲ್ಲಾ ಸಚಿವ ಪಿ.ರಮಾನಾಥ ರೈ ಮೊದಲಾದವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications