ಕಾಸರಗೋಡು ಜಿಲ್ಲೆ ಕರ್ನಾಟಕಕ್ಕೆ : ನಿಮ್ಮ ಮೂಗಿನ ತುದಿಗೆ ಕೃಷ್ಣ ತುಪ್ಪ
ಬೆಂಗಳೂರು ಕೇರಳಕ್ಕೆ ಅಂಟಿಕೊಂಡಿರುವ ಕಾಸರಗೋಡು ಜಿಲ್ಲೆಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂಬ ರಾಜ್ಯದ ಕನ್ನಡಿಗರ ಬಹುದಿನದ ಕಳಕಳಿಗೆ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಇವತ್ತು ಸಹಮತ ವ್ಯಕ್ತಪಡಿಸಿದರು. ಇಂತಹ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕೆಂದು ಆಗ್ರಹಿಸಿ ಗುರುವಾರ ಬೆಂಗಳೂರಿನಲ್ಲಿ ತಮಗೆ ಮನವಿ ಪತ್ರ ಸಲ್ಲಿಸಿದ ನಿಯೋಗದೊಂದಿಗೆ ಕೃಷ್ಣ ಈ ಭಾವನೆಯನ್ನು ಹಂಚಿಕೊಂಡರು.
ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ವಾಜಪೇಯಿ ಅವರ ಬಳಿಗೆ ನಿಯೋಗವೊಂದನ್ನು ಕೊಂಡೊಯ್ಯುವ ಆಶ್ವಾಸನೆಯನ್ನೂ ಕೃಷ್ಣ ನೀಡಿದರು. ಈ ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಸರ್ವಪಕ್ಷ ಸದಸ್ಯರು ಇರುತ್ತಾರೆ.
ಕನ್ನಡಿಗರೇ ಅಧಿಕ ಸಂಖ್ಯೆಯಲ್ಲಿರುವ ಹಾಗೂ ಕರ್ನಾಟಕದ ಒಂದು ಭಾಗವೇ ಆಗಿರುವ ಕಾಸರಗೋಡನ್ನು ರಾಜ್ಯಕ್ಕೆ ಸೇರಿಸಬೇಕೆಂಬ ಒತ್ತಾಯ ಬಹಳ ವರ್ಷಗಳಿಂದ ಇದೆ. ಇನ್ನಾದರೂ ಈ ಆಕಾಂಕ್ಷೆ ಕೈಗೂಡಬೇಕೆನ್ನುವುದು ಕನ್ನಡ ಪ್ರೇಮಿಗಳ ಒತ್ತಾಯ ಎಂದು ಸಾಹಿತಿ ಕಯ್ಯಾರಕೈಯಿಣ್ಣರೈ ಪತ್ರಕರ್ತರಿಗೆ ತಿಳಿಸಿದರು. ಅದಕ್ಕೂ ಮುನ್ನ ಅವರು ಕೃಷ್ಣ ಅವರ ಬಳಿಗೆ ನಿಯೋಗದೊಂದಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ವಿ. ಎಸ್. ಆಚಾರ್ಯ , ಶಾಸಕ ಆಲಾಡಿ ಶ್ರೀನಿವಾಸ ಸೆಟ್ಟಿ, ಮಾಜಿ ಸಂಸದ ರಮಣ ರೈ ಮುಂತಾದವರು ಇದ್ದರು.
(ಕನ್ನಡಇನ್‌ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications