ಒಂದರಿಂದ ಆರು : ಬರುವ ವರ್ಷದಿಂದ ಪಠ್ಯಕ್ರಮದಲ್ಲಿ ಬದಲಾವಣೆ
ಬೆಂಗಳೂರು : ಬರುವ ಶೈಕ್ಷಣಿಕ ವರ್ಷದಿಂದ ಆರನೇ ತರಗತಿಯವರೆಗಿನ ಪಠ್ಯಕ್ರಮದಲ್ಲಿ ಕೆಲವು ಬದಲಾವಣೆ ಆಗಲಿದೆ ಎಂದು ಪಠ್ಯ ಪುಸ್ತಕಗಳ ನಿರ್ದೇಶಕರು ತಿಳಿಸಿದ್ದಾರೆ.
ಒಂದರಿಂದ ನಾಲ್ಕನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಪುನರ್ ರಚಿಸಲಾಗುತ್ತಿದೆ ಹಾಗೂ ಐದನೇ ತರಗತಿಯ ಗಣಿತ, ವಿಜ್ಞಾನ ಮತ್ತು ಸಮಾಜಶಾಸ್ತ್ರಗಳ ಕನ್ನಡ ಮಾಧ್ಯಮದ ಪಠ್ಯಗಳನ್ನು ಪುನರ್ ರಚಿಸಲಾಗುತ್ತಿದೆ. ಆರನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯ ಕನ್ನಡ ಕಸ್ತೂರಿಯನ್ನು ಪರಿಷ್ಕರಿಸಲಾಗುತ್ತಿದೆ. ಅಂತೆಯೇ ದ್ವಿತೀಯ ಭಾಷೆ ಇಂಗ್ಲೀಷ್ ಹಾಗೂ ತೃತೀಯ ಭಾಷೆ ಹಿಂದಿ ಪುಸ್ತಕಗಳನ್ನೂ ಪರಿಷ್ಕರಿಸಲಾಗುತ್ತಿದ್ದು , ಬರುವ ಶೈಕ್ಷಣಿಕ ವರ್ಷದಿಂದ ಹೊಸ ಪಠ್ಯಕ್ರಮ ಜಾರಿಯಾಗುತ್ತದೆ ಎಂದು ಗುರುವಾರ ಹೊರಡಿಸಿರುವ ಪ್ರಕಟಣೆಯಲ್ಲಿ ಪಠ್ಯಪುಸ್ತಕಗಳ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲಾ ಪ್ರಾಥಮಿಕ ಶಿಕ್ಷಣ ಯೋಜನೇತರ ಜಿಲ್ಲೆಗಳಲ್ಲಿ ಕನ್ನಡ, ಮರಾಠಿ, ತಮಿಳು, ತೆಲುಗು ಹಾಗೂ ಉರ್ದು ಭಾಷೆಗಳಲ್ಲಿ ಕನಿಷ್ಠ ಮಟ್ಟದ ಕಲಿಕೆ ಆಧಾರದ ಪಠ್ಯ ಪುಸ್ತಕಗಳನ್ನು ಪರಿಚಯಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications