ಸಂಕ್ರಾಂತಿಯ ಕೊಡುಗೆ : ಇಳಿಜೀವಗಳಿಗೆ ಸರ್ಕಾರದ ‘ಅನ್ನಪೂರ್ಣ’
ಹೈದರಾಬಾದ್ : ದೇಶದ 80 ಲಕ್ಷಕ್ಕೂ ಹೆಚ್ಚು ಮಂದಿಗೆ ಅನುಕೂಲ ಮಾಡಿಕೊಡಲು 610 ಕೋಟಿ ರುಪಾಯಿ ವೆಚ್ಚದ ವಿಸ್ತುತ ಅನ್ನಪೂರ್ಣ ಆಹಾರ ಭದ್ರತಾ ಯೋಜನೆಯನ್ನು ಕೇಂದ್ರ ಸರ್ಕಾರ ಜನವರಿ 14ರಂದು ಜಾರಿಗೆ ತರಲಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಶುಕ್ರವಾರ ಪ್ರಕಟಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ಕಳೆದ ಏಪ್ರಿಲ್‌ನಲ್ಲಿ 100 ಕೋಟಿ ರುಪಾಯಿ ಕೇಂದ್ರ ಸರ್ಕಾರದ ನೆರವಿನಲ್ಲಿ ಜಾರಿಗೆ ಬಂದ ಈ ಯೋಜನೆಯು ವೃದ್ಧಾಪ್ಯ ಪಿಂಚಣಿ ಮೂಲಕ 14 ಲಕ್ಷ ಹಿರಿಯ ನಾಗರಿಕರಿಗೆ ಉಪಯೋಗವಾಗಿದೆ. ಪ್ರಧಾನಿ ವಾಜಪೇಯಿ ಅವರ ಆದೇಶದ ಮೇರೆಗೆ ಈಗ ಇದೇ ಯೋಜನೆಯನ್ನು ವಿಸ್ತರಿಸಿದ್ದು, ಇನ್ನಷ್ಟು ಹಿರೀಕರ ಹೊಟ್ಟೆ ಸಮಸ್ಯೆ ಬಗೆಹರಿಯಲಿದೆ ಎಂದು ನಾಯ್ಡು ಹೇಳಿದರು.
ಈ ಯೋಜನೆಯ ಲಾಭವನ್ನು ಇನ್ನೂ 68 ಲಕ್ಷ ಹಿರಿಯ ನಾಗರಿಕರಿಗೆ ದಕ್ಕಿಸುವ ಉದ್ದೇಶದಿಂದ ಸರ್ಕಾರ ಕೊಡುತ್ತಿರುವ ಸಂಕ್ರಾಂತಿಯ ಕೊಡುಗೆ ಇದು. ಈ ಯೋಜನೆಯಡಿಯಲ್ಲಿ ಜೀವನಕ್ಕೆ ಯಾವುದೇ ದುಡಿಮೆಯಿಲ್ಲದ 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರಿಗೆ ಪ್ರತಿ ತಿಂಗಳು 10 ಕೆ.ಜಿ. ಅಕ್ಕಿ ಅಥವಾ ಗೋಧಿ (ಆಯಾ ಪ್ರದೇಶಕ್ಕೆ ಅನುಗುಣವಾಗಿ) ವಿತರಿಸಲಾಗುವುದು ಎಂದರು.
ಅಂತ್ಯೋದಯ ಅನ್ನ ಯೋಜನೆ : ಕೇಂದ್ರದ 2300 ಕೋಟಿ ರುಪಾಯಿ ನೆರವಿನಲ್ಲಿ ಕಡುಬಡವರಿಗೆ ರಿಯಾಯಿತಿ ದರದಲ್ಲಿ ಆಹಾರ ಧಾನ್ಯ ಒದಗಿಸಲು ಅಂತ್ಯೋದಯ ಅನ್ನ ಯೋಜನೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯ ಸದ್ಯದಲ್ಲೇ ಜಾರಿಗೆ ತರಲಿದೆ. ಈ ಯೋಜನೆಯಲ್ಲಿ ಪ್ರತಿ ಅರ್ಹ ಕುಟುಂಬಕ್ಕೆ ತಿಂಗಳಿಗೆ 25 ಕೆ.ಜಿ. ಆಹಾರ ಧಾನ್ಯವನ್ನು ರಿಯಾಯಿತಿ ದರದಲ್ಲಿ (ಕೆ.ಜಿ. ಅಕ್ಕಿಗೆ 3 ರುಪಾಯಿ, ಕೆ.ಜಿ. ಗೋಧಿಗೆ 2 ರುಪಾಯಿ) ಪೂರೈಸಲಾಗುವುದು ಎಂದು ವೆಂಕ--ಯ್ಯ-ನಾ-ಯ್ಡು ತಿಳಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications