ಡಬ್ಲ್ಯೂಟಿಓ : ಮುಖ್ಯಮಂತ್ರಿಗಳ ಸಭೆ ಕರೆಯಲು ಕೃಷ್ಣ ಒತ್ತಾಯ
(-ಮಂಗ-ಳೂ-ರು ಪ್ರತಿ-ನಿ-ಧಿ-ಯಿಂ-ದ)
ಸುಳ್ಯ: ಬೆಂಬಲ ಬೆಲೆ ಘೋಷಿಸುವ ಅಥವಾ ಮಾರಾಟ ತೆರಿಗೆ ವಿನಾಯಿತಿ ನೀಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ಸ್ಪಷ್ಟಪಡಿಸಿದ್ದಾರೆ. ಸುಳ್ಯದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದ್ದಾರೆ.
ಕೃಷ್ಯುತ್ಪನ್ನ ಬೆಲೆ ಕುಸಿತದ ಪರಿಣಾಮ ಎಲ್ಲ ರಾಜ್ಯಗಳಿಗೂ ತಟ್ಟಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಪಾತ್ರ ಮಾತ್ರ ಸಾಲದು ಎಂದು ಅವರು ಕೇಂದ್ರದ ಹೊಣೆಗಾರಿಕೆಯ ಬಗ್ಗೆ ಸೂಚ್ಯವಾಗಿ ತಿಳಿಸಿದರು. ವಿಶ್ವ ವ್ಯಾಪಾರ ಸಂಸ್ಥೆ ನೀತಿ ಸೇರಿದಂತೆ ಆಮದು ಅವಕಾಶಗಳ ಬಗ್ಗೆ ಪುನರ್ಪರಿಶೀಲನೆ ನಡೆಯಬೇಕು. ಪ್ರಧಾನಮಂತ್ರಿಗಳು ಈ ಬಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಬೇಕು ಎಂದು ಅವರು ಒತ್ತಾಯಿಸಿದರು.
ಕಾಲೇಜು ಅನುದಾನ ಸಮಸ್ಯೆ : ಜೋಳ, ತೊಗರಿ ಮತ್ತಿತರ ಆಹಾರ ಪದಾರ್ಥಗಳಿಗೆ ಬೆಂಬಲ ನಿಧಿ ಸ್ಥಾಪನೆ ಪ್ರಯತ್ನ ನಡೆದಿದೆ ಎಂದೂ ಅವರು ಪ್ರಶ್ನೆಯಾಂದಕ್ಕೆ ಉತ್ತರಿಸುತ್ತಾ ತಿಳಿಸಿದರು. ಅನುದಾನಿತ ಕಾಲೇಜುಗಳಿಗೆ ಶೇ.15 ಅನುದಾನ ಕಡಿತದಿಂದ ಉಪನ್ಯಾಸಕರು ಎರಡು ತಿಂಗಳು ಸಂಬಳವಿಲ್ಲದೆ ದುಡಿಯಬೇಕಾದ ಭೀತಿ ಎದುರಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಉನ್ನತ ಶಿಕ್ಷಣದಿಂದ ತನ್ನ ಪಾಲುದಾರಿಕೆಯನ್ನು ಹಂತಹಂತವಾಗಿ ಹಿಂದಕ್ಕೆ ಪಡೆಯುತ್ತಿರುವ ಬಗ್ಗೆ ಈಗಾಗಲೇ ತನ್ನ ಸ್ಪಷ್ಟ ನಿಲವು ಪ್ರಕಟಿಸಿದೆ ಎಂದು ಹೇಳಿದರು.
ಸರಕಾರಿ ಕಾಲೇಜು ಉಪನ್ಯಾಸಕರಿಗೆ ವೇತನ ನೀಡಿ ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ಮಾತ್ರ ಹಣ ಒದಗಿಸದಿರುವ ಕುರಿತು ಕೇಳಲಾದ ಪ್ರಶ್ನೆಗೆ ಇದನ್ನು ಕಾಲೇಜು ಆಡಳಿತ ಮಂಡಳಿಯೇ ಭರಿಸ ಬೇಕು ಎಂಬ ಜಾರಿಕೆಯ ಉತ್ತರ ನೀಡಿ, ಕೃಷ್ಣ ನುಣುಚಿಕೊಂಡರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications