ಮಧ್ಯ ಅಮೆರಿಕದಲ್ಲಿ ಭೂಕಂಪ :100 ಸಾವು, 1200 ಮಂದಿ ನಾಪತ್ತೆ
ಕ್ಯಾಲಿಫೋರ್ನಿಯಾ : ಭಾನುವಾರ ಬೆಳಗಿನ ಜಾವ ಲಾಸ್ ಏಂಜಲೀಸ್‌ನಲ್ಲಿ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.3ರಷ್ಟಿತ್ತೆಂದು ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ. ಭೂಕಂಪನ ಈಶಾನ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಭೂಮಾಪನಾ ಇಲಾಖೆ ಹೇಳಿದೆ.
ಈ ಮಧ್ಯೆ ಶನಿವಾರ ಮಧ್ಯ ಅಮೆರಿಕಾದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಕನಿಷ್ಠ 100 ಜನರು ಸತ್ತಿದ್ದು, 1200ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಗಳು ಹೇಳಿವೆ. ಎಲ್ ಸಾವ್ವಡೋರ್‌ನಲ್ಲಿ ಸಂಭವಿಸಿರುವ ಭೂಕಂಪದಲ್ಲಿ ಸಾವಿರಾರು ಜನರು ಕಣ್ಮರೆಯಾಗಿದ್ದಾರೆ. ಪ್ರಸಕ್ತ 100 ಜನರು ಸತ್ತಿರಬಹುದು ಎಂದು ತಿಳಿದುಬಂದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಲ್ವಡೋರ್‌ನ ಅಧ್ಯಕ್ಷ ರು ದೇಶಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿ, ಅಂತಾರಾಷ್ಟ್ರೀಯ ಸಮುದಾಯದ ನೆರವು ಕೋರಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯ ಸಂತ್ರಸ್ಥರ ನೆರವಿಗೆ ಮುಂದಾಗಿದೆ. ಸಾಲ್ವಡೋರ್‌ನ ದಕ್ಷಿಣ ಕರಾವಳಿಯಲ್ಲಿ ಭೂಕಂಪ ಕೇಂದ್ರೀಕೃತವಾಗಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ 7.6 ಎಂದು ದಾಖಲಾಗಿದೆ. ಮೆಕ್ಸಿಕೋ ನಗರದಲ್ಲಿ ಕೂಡ ಕೆಲವು ಕಟ್ಟಗಳು ನೆಲ ಕಚ್ಚಿವೆ ಎಂದು ವರದಿಗಳು ಹೇಳಿವೆ. ವಿದ್ಯುತ್ ಹಾಗೂ ದೂರವಾಣಿ ಸೇವೆ ಅಸ್ತವ್ಯಸ್ತವಾಗಿದೆ.
ಭೂಕಂಪನದ ಕೆನ್ನಾಲಿಗೆಗೆ ಎಲ್ ಸಾಲ್ವಡೋರ್‌ನಲ್ಲೇ ಕನಿಷ್ಠ 79 ಮಂದಿ ಆಹುತಿಯಾಗಿದ್ದಾರೆ. ಪೊಲೀಸರು ಅವಶೇಷಗಳಡಿ ಸಿಕ್ಕಿಕೊಂಡಿರುವ ನೂರಾರು ಮಂದಿಯನ್ನು ಪಾರುಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ಮುಂದುವರಿದಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications