ಸರಕಾರಿ ಭೂಮಿ ಒತ್ತುವರಿ ತಡೆಗಟ್ಟಲು ವಿಶೇಷ ಕಾರ್ಯಪಡೆ -ಕೃಷ್ಣ
ಬೆಂಗಳೂರು : ಸರಕಾರೀ ಭೂಮಿ ಒತ್ತುವರಿ ಮಾಡಿದವರನ್ನು ಪತ್ತೆ ಹಚ್ಚಲು ಕಾರ್ಯ ಪಡೆಯಾಂದನ್ನು ನಿಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ.
ಅವರು ಶನಿವಾರದಂದು ಸುದ್ದಿ ಸಂಸ್ಥೆಯಾಂದಿಗೆ ಮಾತನಾಡುತ್ತಾ ಸರಕಾರಿ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವವರನ್ನು ಪತ್ತೆ ಹಚ್ಚಿ ಶಿಕ್ಷಿಸಲಾಗುವುದು ಎಂದರು. ವಿಶೇಷ ಕಾರ್ಯ ಪಡೆ ರಚನೆ ಕುರಿತು ಚರ್ಚಿಸಲು ಮುಂದಿನ ವಾರದಲ್ಲಿ ಉನ್ನತ ಮಟ್ಟದ ಸಭೆ ಕರೆಯಲಾಗುವುದು. ಕಂದಾಯ ಇಲಾಖೆ ಮತ್ತು ಪೊಲೀಸ್ ವಿಭಾಗದ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಒತ್ತುವರಿ ಮಾಡಿರುವ ಜಾಗದಲ್ಲಿ ತಲೆಯೆತ್ತಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಆದರೂ ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಭೂ ಒತ್ತುವರಿಯನ್ನು ತಡೆಗಟ್ಟುವುದು ಸಾಧ್ಯವಾಗಿಲ್ಲ. ಆ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕುರಿತು ಅಗತ್ಯ ಕಾಯ್ದೆ ತಿದ್ದುಪಡಿಯನ್ನು ಮಾಡಲಾಗುವುದು. ಇದರಿಂದಾಗಿ ಅಕ್ರಮವಾಗಿ ಗಳಿಸಿರುವ ಭೂಮಿಯನ್ನು ಸಕ್ರಮವೆಂದು ಸಾಬೀತುಪಡಿಸಲು ಕಾನೂನಿನ ದುರ್ಬಳಕೆಯಾಗವುದನ್ನು ತಡೆಯುವುದು ಸಾಧ್ಯ ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications