ಮುಗಿಲು ಸೇರಿದ ಕೆಂಧೂಳು
ಬೆಂಗಳೂರು : ಸೂರ್ಯದೇವ ದಕ್ಷಿಣಾಯನದಿಂದ ಉತ್ತರಾಣದತ್ತ ಇಂದು ತನ್ನ ಚಲನೆಯನ್ನು ಆರಂಭಿಸಿದ್ದಾನೆ ಎನ್ನುತ್ತಾರೆ ಧಾರ್ಮಿಕರು. ಭೂಮಿಯ ಚಲನೆಯಿಂದ ಇಂದಿನಿಂದ ಬಿಸಿಲಿನ ಪ್ರಖರತೆ ಹಂತಹಂತವಾಗಿ ಹೆಚ್ಚುತ್ತದೆ ಎನ್ನುತ್ತಾರೆ ಖಭೌತಜ್ಞರು. ಒಟ್ಟಿನಲ್ಲಿ ಬೇಸಿಗೆಯ ಆರಂಭಕ್ಕೆ ಮಕರ ಸಂಕ್ರಮಣವೇ ನಾಂದಿ.
ಬೆದರುವ ದನಕರುಗಳನ್ನು ಬೆಂಕಿಯ ಮೇಲೆ ಹಾರಿಸಲು ರೈತಾಪಿ ಜನರು ತಮ್ಮ ದನಕರುಗಳ ಮೈ ತೊಳೆದು ಅಲಂಕರಿಸುತ್ತಿದ್ದಾರೆ. ಸಂಭ್ರಮದಿಂದ ಮೆರವಣಿಗೆಯಲ್ಲಿ ಸಾಗಲು ಸಜ್ಜಾಗಿರುವ ಧನಕರುಗಳ ಗೊರಸಿನ ರಭಸಕ್ಕೆ ಎದ್ದಿರುವ ಕೆಂಧೂಳು ಆಗಸದ ಬಣ್ಣವನ್ನೇ ಬದಲಿಸಿಬಿಟ್ಟಿದೆ ಎನ್ನಿಸುತ್ತಿದೆ.
ಅಂದಹಾಗೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಆಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡುಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ರಾಜ್ಯದ ಅತಿ ಕಡಿಮೆ ತಾಪಮಾನ 15.2 ಡಿಗ್ರಿ ಸೆಲ್ಸಿಯಸ್ ಮಂಡ್ಯದಲ್ಲಿ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ರಾಜ್ಯದಲ್ಲಿ ಒಣಹವೆಯದೇ ಕಾರುಭಾರು. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 17 ಡಿಗ್ರಿಯ ಆಸುಪಾಸಿನಲ್ಲಿರುತ್ತದೆ.
| ಮುಖಪುಟ / ಹವಾ ಹವಾ |
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications