ಕುಂಭಮೇಳ : ಪವಿತ್ರ ಸ್ನಾನ ಸಂದರ್ಭದಲ್ಲಿಛಾಯಾಗ್ರಹಣ ನಿಷೇಧ
ಕುಂಭ ನಗರ : ಪವಿತ್ರ ಸ್ನಾನದ ಸಂದರ್ಭದಲ್ಲಿ ಫೋಟೋ ತೆಗೆಯುವುದನ್ನು ಮಹಾ ಕುಂಭ ಮೇಳದ ಆಡಳಿತ ವಿಭಾಗವು ನಿಷೇಧಿಸಿದೆ.
ನಾಗಾಸಾಧುಗಳು ಪವಿತ್ರ ಸ್ನಾನ ಮಾಡುವ ಸಂದರ್ಭದಲ್ಲಿ ಪ್ರಾದೇಶಿಕ ಮತ್ತು ವಿದೇಶೀ ಪ್ರವಾಸಿಗಳು ಫೋಟೋ ತೆಗೆಯುವುದರಿಂದ ವಿವಾದ ಉಂಟಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಧ್ಯಮ ಪ್ರತಿನಿಧಿಗಳಲ್ಲದವರೂ ಕೂಡ ನಾಗಾ ಸಾಧುಗಳ ಗುಂಪಿನೊಂದಿಗೆ ಸೇರಿಕೊಂಡು ಅಕ್ರಮವಾಗಿ ಫೋಟೋ ತೆಗೆದಿರುವುದಾಗಿ ದೂರುಗಳು ಬರಲಾರಂಭಿಸಿದಾಗ ಈ ಆಜ್ಞೆ ಹೊರಡಿಸಬೇಕಾಯಿತು ಎಂದು ಕುಂಭನಗರದಲ್ಲಿನ ಶಾಖಾಧಿಕಾರಿ ಸದಾಕಾಂತ್ ಹೇಳಿದ್ದಾರೆ.
ನಾಗಾ ಸಾಧುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದು. ಆದ್ದರಿಂದ ಮುಂದಿನ ಸ್ನಾನದ ದಿನಗಳಲ್ಲಿ ಅಂದರೆ ಮುಖ್ಯವಾಗಿ ಜನವರಿ 24ರ ಮೌನಿ ಅಮಾವಾಸ್ಯೆಯ ದಿನದಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಂಗಮ ಪ್ರದೇಶಕ್ಕೆ ಹೋಗಲು ಅವಕಾಶ ನೀಡಲಾಗುವುದು. ಮಕರ ಸಂಕ್ರಾಂತಿಯ ಪವಿತ್ರ ದಿನದಂದು ಸುಮಾರು 8 ಮಿಲಿಯನ್ ಮಂದಿ ತ್ರಿವೇಣಿ ಸಂಗಮದಲ್ಲಿ ಮಿಂದರು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications