ಕಾರೆಹಳ್ಳಿಯಲ್ಲಿ ಕೆಎಸ್ಸಾರ್ಟಿಸಿ ಬಸ್-ಟಿಪ್ಪರ್ ಲಾರಿ ಡಿಕ್ಕಿ,ಆರು ಸಾವು
ಭದ್ರಾವತಿ : ಟಿಪ್ಪರ್ ಲಾರಿ ಮತ್ತು ಕೆಎಸ್ ಆರ್ಟಿಸಿ ಬಸ್ ಅಪಘಾತದಲ್ಲಿ ಮೂವರು ಮಹಿಳೆಯರೂ ಸೇರಿದಂತೆ ಆರು ಮಂದಿ ಮೃತ ಪಟ್ಟು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಕಾರೆಹಳ್ಳಿ ಗ್ರಾಮದ ಬಳಿ ನಡೆದಿದೆ.
ಬಾದಾಮಿಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ಮತ್ತು ಕೆಮ್ಮಣ್ಣು ಗುಂಡಿಯಿಂದ ವಿಐಎಸ್ಎಲ್ಗೆ ಅದಿರು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿ, ರಾತ್ರಿ 8.30ರ ಸುಮಾರಿಗೆ ಮುಖಾಮುಖಿಯಾದಾಗ ಒಬ್ಬರು ಮಹಿಳೆ ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲಿಯೇ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು, ಆಸ್ಪತ್ರೆಗೆ ಸಾಗಿಸುವಾಗ ದಾರಿ ನಡುವೆ ಮೃತರಾದರು. ಗಾಯಗೊಂಡವರಲ್ಲಿ 10 ಮಂದಿಯ ಸ್ಥಿತಿ ಕರುಣಾಜನಕವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರಲ್ಲಿ ತರಿಕೆರೆಯ ಹಾದಿಗೆರೆಯ ದಾಕ್ಷಾಯಣಮ್ಮ ಅವರನ್ನು ಗುರುತಿಸಲಾಗಿದ್ದು, ಉಳಿದವರ ಗುರುತು ಸಿಕ್ಕಿಲ್ಲ. ದಾಕ್ಷಾಯಣಮ್ಮ ಅವರ ಪತಿ ಬಾಳೆ ಹೊನ್ನೂರಿನ ಪೊಲೀಸ್ ಪೇದೆ, ಚಂದ್ರಶೇಖರ್ ಕೂಡ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿಪ್ಪರ್ ಚಾಲಕ ಏಸುದಾಸ್ ಅವರನ್ನು ಎಂ.ಪಿ.ಎಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. (ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications