ಜ. 29 ರಿಂದ ಇತಿಹಾಸ ಪ್ರಸಿದ್ಧ ಚಂದ್ರಗಿರಿ ಚಿಕ್ಕಬೆಟ್ಟದ ಮಹೋತ್ಸವ
ಚನ್ನರಾಯಪಟ್ಟಣ : ಶ್ರವಣಬೆಳಗೊಳದಲ್ಲಿರುವ ಚಂದ್ರಗಿರಿ ಚಿಕ್ಕಬೆಟ್ಟ ಮಹೋತ್ಸವ ಜ.29 ರಿಂದ ಫೆ.7 ರವರೆಗೆ ನಡೆಯಲಿದೆ ಎಂದು ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.
ಚಂದ್ರಗಿರಿ ಚಿಕ್ಕಬೆಟ್ಟದ ಇತಿಹಾಸ ಅತ್ಯಂತ ಪ್ರಾಚೀನದ್ದಾಗಿದ್ದು , ವಿಶ್ವ ಪ್ರಸಿದ್ಧ ಗೊಮ್ಮಟೇಶ್ವರ ಮೂರ್ತಿಗಿಂತಲೂ ಚಿಕ್ಕಬೆಟ್ಟದ ಇತಿಹಾಸ 1300 ವರ್ಷಗಳಷ್ಟು ಹಳೆಯದೆಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ಚಂದ್ರಗುಪ್ತ ಮೌರ್ಯನ ಕಾಲದ ಇತಿಹಾಸವನ್ನು ಬಿಂಬಿಸುವ ಈ ಬೆಟ್ಟದಲ್ಲಿ ಈವರೆಗೆ ಸುಮಾರು 575 ಶಾಸನಗಳು ಲಭ್ಯವಾಗಿವೆ.
ಇದೇ ಮೊದಲ ಬಾರಿಗೆ ಚಿಕ್ಕಬೆಟ್ಟ ಮಹೋತ್ಸವ ನಡೆಯಲಿದ್ದು , ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ಉತ್ಸವವನ್ನು ನಡೆಸಲಾಗುವುದು ಎಂದು ಸ್ವಾಮೀಜಿ ತಿಳಿಸಿದ್ದಾರೆ. ಅವರು ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಚಂದ್ರಗಿರಿ ಚಿಕ್ಕಬೆಟ್ಟದ ಧಾರ್ಮಿಕ, ಸಾಂಸ್ಕೃತಿಕ ಮಹತ್ವವನ್ನು ರಾಷ್ಟ್ರಮಟ್ಟದಲ್ಲಿ ಪ್ರಚುರಪಡಿಸುವುದು ಉತ್ಸವದ ಉದ್ದೇಶ ಎಂದು ಸ್ವಾಮೀಜಿ ಹೇಳಿದರು.
ವಿಚಾರಗೋಷ್ಠಿ, ಶಾಸನ ,ಸಾಹಿತ್ಯ ಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವದ ಅಂಗವಾಗಿ ನಡೆಯಲಿವೆ. ಕೇಂದ್ರ ಸಂಸ್ಕೃತಿ ಖಾತೆ ಅನಂತಕುಮಾರ್ ಉತ್ಸವವನ್ನು ಉದ್ಘಾಟಿಸುವರು. ರಾಜ್ಯ ಕಂದಾಯ ಖಾತೆ ಸಚಿವ ಎಚ್. ಸಿ. ಶ್ರೀಕಂಠಯ್ಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ವೀರಕುಮಾರ್ ಪಾಟೀಲ್, ಸಂಸದ ಜಿ. ಪುಟ್ಟಸ್ವಾಮಿಗೌಡ ಹಾಗೂ ರಾಜ್ಯದ ಎಲ್ಲಾ ಜೈನ ಮಠಾಧಿಪತಿಗಳು ಉತ್ಸವದಲ್ಲಿ ಹಾಜರಿರುವರು ಎಂದು ಭಟ್ಟಾರಕ ಸ್ವಾಮಿಗಳು ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications