ಜನವರಿ 20 ಹಾಗೂ 21ಕ್ಕೆ ಲಾರಿ ಮಾಲೀಕರ ಒಕ್ಕೂಟದ ಸಮ್ಮೇಳನ
ಬೆಂಗಳೂರು : ಕರ್ನಾಟಕ ಲಾರಿ ಮಾಲೀಕರ ಒಕ್ಕೂಟ ಜನವರಿ 20 ಹಾಗೂ 21ರಂದು ವಿಶೇಷ ಸಮ್ಮೇಳನ ಆಯೋಜಿಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ 1000ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಒಕ್ಕೂಟದ ಅಧ್ಯಕ್ಷ ಬಿ.ಚನ್ನರೆಡ್ಡಿ ಮಾಧ್ಯಮಗೋಷ್ಠಿಯಲ್ಲಿ ಬುಧವಾರ ಈ ವಿಷಯ ತಿಳಿಸಿದರು. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತ ಕುಮಾರ್, ಕೇರಳ ಸಾರಿಗೆ ಸಚಿವ ಸಿ.ಕೆ.ನಾಯ್ಡು ಅವರ ಜೊತೆಗೆ ಕರ್ನಾಟಕದ ಕೆಲವು ಸಚಿವರೂ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಲಾರಿಗಳಿಗೆ ಪರವಾನಗಿ ನೀಡಿಕೆಯಲ್ಲಿನ ನಿಬಂಧನೆಗಳನ್ನು ಸರ್ಕಾರ ತೆಗೆದು ಹಾಕಿದ್ದರೂ, ಚೆಕ್‌ಪೋಸ್ಟ್ ಸಿಬ್ಬಂದಿ ಲಾರಿಗಳ ಸರಾಗ ಚಾಲನೆಗೆ ಅಡ್ಡಿ ಒಡ್ಡುತ್ತಿದ್ದಾರೆ. ಉತ್ತಮ ಸೇವೆ ಒದಗಿಸುತ್ತಿರುವ ಈವತ್ತಿನ ಸಂದರ್ಭದಲ್ಲೂ 1939ರ ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳನ್ನು ಸಡಿಲಿಸಿಲ್ಲ. ನಮ್ಮೂರಿಂದ ಲಾರಿ ಹೊರಟಿತೆಂದರೆ ಅದರೊಟ್ಟಿಗೇ ಸಮಸ್ಯೆಗಳೂ ಇದಿರಾಗುತ್ತವೆ. ಪ್ರತಿ ರಾಜ್ಯ ಸರ್ಕಾರೀ ಸಂಸ್ಥೆಗಳು ಲಾರಿ ಸಂಚಾರಕ್ಕೆ ಒಂದಲ್ಲ ಒಂದು ತಕರಾರೆತ್ತುತ್ತವೆ ಎಂದು ಹೇಳಿದರು.
ಸಮ್ಮೇಳನದಲ್ಲಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸೂಕ್ತ ಪರಿಹಾರೋಪಾಯಗಳನ್ನೂ ಕಂಡುಕೊಳ್ಳಲಾಗುವುದು. ಜೊತೆಗೆ ಲಾರಿ ಉದ್ಯಮದ ಕ್ಷಿಪ್ರ ಅಭಿವೃದ್ಧಿಗಾಗಿ ಸಂಸ್ಥೆಯಾಂದನ್ನು ಸ್ಥಾಪಿಸಲಾಗುವುದು ಎಂದು ಚನ್ನರೆಡ್ಡಿ ತಿಳಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications