ರಸ್ತೆ ಅಭಿವೃದ್ಧಿ ಯೋಜನೆ ಪರಿಶೀಲನೆ-ಗೆಬೆಂಗಳೂರಿಗೆ ವಿಶ್ವಬ್ಯಾಂಕ್ ತಂಡ
ಸಿಡ್ನಿ : ರಾಜ್ಯದಲ್ಲಿ 1683 ಕೋಟಿ ರುಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸುವ ಮೊದಲ ಹಂತದ ಯೋಜನೆಗಳನ್ನು ಪರಿಶೀಲಿಸಲು 9 ಮಂದಿಯ ವಿಶ್ವ ಬ್ಯಾಂಕ್ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಲಿದೆ ಎಂದು ಸಾರ್ವಜನಿಕ ಕಾಮಗಾರಿ ಸಚಿವ ಧರಂ ಸಿಂಗ್ ಬುಧವಾರ ತಿಳಿಸಿದ್ದಾರೆ.
ರಾಜ್ಯದ ವಿವಿಧೆಡೆಗಳಲ್ಲಿ ಜಾರಿಯಲ್ಲಿರುವ ಯೋಜನೆಗಳ ಬಗ್ಗೆ ವಿಮರ್ಶಿಸಿ ಮಾತನಾಡುತ್ತಿದ್ದ ಸಚಿವರು, ವಿಶ್ವ ಬ್ಯಾಂಕ್ ತಂಡ 13 ದಿನಗಳ ಕಾಲ ರಾಜ್ಯವನ್ನು ಭೇಟಿ ನೀಡಲಿದ್ದು, ಯೋಜನೆಗಳ ರೂಪುರೇಷೆ ಪರಿಶೀಲಿಸಲಿದೆ. ಪರಿಶೀಲನೆ ನಂತರ ಅಧಿಕಾರಿಗಳು ತೃಪ್ತರಾದಲ್ಲಿ ಏಪ್ರಿಲ್ ಹೊತ್ತಿಗೆ ಅಂತಿಮ ಹಂತದ ಒಡಂಬಡಿಕೆ ಸಾಧ್ಯವಾಗಲಿದ್ದು, ವಿಶ್ವ ಬ್ಯಾಂಕ್ ಸಾಲ ರಾಜ್ಯಕ್ಕೆ ಹರಿದು ಬರಲಿದೆ ಎಂದರು.
ಯೋಜನಾ ವೆಚ್ಚದ ಶೇ.70ರಷ್ಟು ಖರ್ಚನ್ನು ವಿಶ್ವಬ್ಯಾಂಕ್ ನೀಡಲಿದೆ. ಸಾಲ ಮತ್ತಿತರೆ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದ್ದು, 2043 ಕಿಮೀ ಉದ್ದದಷ್ಟು ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು. ನ್ಯಾಷನಲ್ ಬ್ಯಾಂಕ್‌ನಿಂದ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಾಲ ಪಡೆದಿರುವ ಸರ್ಕಾರ ಈಗಾಗಲೇ 60 ಕೋಟಿ ರುಪಾಯಿ ವೆಚ್ಚದಲ್ಲಿ 1420 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ ಎಂದು ಧರಂ ಸಿಂಗ್ ಹೇಳಿದರು.
ಇಪ್ಪತ್ತನಾಲ್ಕು ಜಿಲ್ಲೆಗಳಲ್ಲಿ ರಸ್ತೆ ಕಾಮಗಾರಿ ನಡೆಸಲು 57 ನಿರ್ಮಾಣ ಸಂಸ್ಥೆಗಳು ಮುಂದೆ ಬಂದಿವೆ. ಆದರೆ ಮಂಡ್ಯ, ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಇನ್ನೂ ಯಾರೂ ಮುಂದಾಗಿಲ್ಲ. ಖರ್ಚು ಸ್ವಲ್ಪ ಅಧಿಕವಾದರೂ ಪರವಾಗಿಲ್ಲ, ಕಾಮಗಾರಿ ಮಾತ್ರ ಪಕ್ಕಾ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications