ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ ಶುಭವಾಗಲಿ
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅವರ ವಿವಾಹ ಅತ್ಯಂತ ಸರಳ ಹಾಗೂ ಸಂಭ್ರಮದಿಂದ ಬುಧವಾರ ರಾತ್ರಿ ಇಲ್ಲಿ ನೆರವೇರಿತು. ತುಮಕೂರಿನ ಉದ್ಯಮಿ ಸುರೇಶ್ ಬಾಬು ಅವರ ಪುತ್ರ ಎಂಜಿನಿಯರ್ ಅಮಿತ್ ಅನ್ವಯಿಕ ಮನಃಶಾಸ್ತ್ರ ಪದವೀಧರೆಯಾದ ಶ್ರದ್ಧಾ ಅವರನ್ನು ವರಿಸಿದರು.
ಜಿನ ಸಂಪ್ರದಾಯದ ರೀತ್ಯ ನಡೆದ ಈ ಮದುವೆಯ ಪೌರೋಹಿತ್ಯವನ್ನು ಅಳದಂಗಡಿಯ ಖ್ಯಾತ ಜೈನ ಪುರೋಹಿತರಾದ ಆದಿರಾಜ ಇಂದ್ರ ಹಾಗೂ ಇತರ ಏಳು ಹಿರಿಯ ವಿದ್ವಾಂಸರು ವಹಿಸಿದ್ದರು. ತೀರಾ ಖಾಸಗಿಯಾಗಿ ನಡೆದ ಈ ಮದುವೆಯ ಸಮಾರಂಭಕ್ಕೆ ಆಗಮಿಸಿದ್ದ ಡಾ. ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ವೀರಕುಮಾರ ಪಾಟೀಲ್, ಮೋಟಮ್ಮ, ಚಂದ್ರಪ್ರಭಾ ಅರಸ್, ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರು ವಧೂವರರಿಗೆ ಶುಭಕೋರಿದರು.
ಹೆಗ್ಗಡೆ ದಂಪತಿಗಳು ಸಪ್ತ ಮಹಾ ವಾಕ್ಯೋಚ್ಛರಣೆ ಮೂಲಕ ತಮ್ಮ ಪುತ್ರಿಗೆ ಸಪ್ತಪದಿ ತುಳಿಸಿ, ವಧುವನ್ನು ಧಾರೆ ಎರೆದುಕೊಟ್ಟರು. ವಿವಾಹದ ನಿಮಿತ್ತ ಮೂರು ದಿನ ಧಾರ್ಮಿಕ ವಿಧಿಗಳು ಜರುಗಲಿದ್ದು, ಗುರುವಾರ ಸಂಜೆ ಮಂಗಳಮಯ ಆರತಕ್ಷತೆ ನಡೆಯಲಿದೆ.
(ಇನ್‌ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications