ಕದನ ವಿರಾಮಕ್ಕೆ ಉತ್ತಮ ಪ್ರತಿಕ್ರಿಯೆ : ಉಡುಪಿಯಲ್ಲಿ ವಾಜಪೇಯಿ
(ಮಂಗಳೂರು ಪ್ರತಿನಿಧಿಯಿಂದ)
ಉಡುಪಿ : ಪ್ರಕ್ಷುಬ್ಧ ಕಾಶ್ಮೀರ ಕೊಳ್ಳ ಪ್ರದೇಶದಲ್ಲಿ ಭಾರತ ಸರ್ಕಾರ ಘೋಷಿಸಿರುವ ಕದನ ವಿರಾಮಕ್ಕೆ ಅಂತರರಾಷ್ಟ್ರೀಯ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪ್ರಧಾನಿ ಎ.ಬಿ. ವಾಜಪೇಯಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದಲ್ಲಿ ತಮ್ಮ ಎರಡು ದಿನಗಳ ಪ್ರವಾಸವನ್ನು ಗುರುವಾರ ಉಡುಪಿಯಿಂದ ಆರಂಭಿಸಿದ ಅವರು, ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಪಾಕಿಸ್ತಾನದೊಂದಿಗೆ ಮಾತುಕತೆಗೆ ಭಾರತ ಸದಾ ಸಿದ್ಧ . ಆದರೆ, ಮಾತುಕತೆಗೆ ಸೌಹಾರ್ದ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪಾಕಿಸ್ತಾನದ ನಾಯಕತ್ವದ್ದು ಎಂದು ಪ್ರಧಾನಿ ಹೇಳಿದರು.
ಅಗ್ನಿ ಕ್ಷಿಪಣಿ ಪರೀಕ್ಷೆಯನ್ನು ದೇಶದ ಸ್ವಾವಲಂಬನೆ ದೃಷ್ಟಿಯಿಂದ ನಡೆಸಲಾಗಿದೆಯೇ ಹೊರತು ಯಾವ ದೇಶಕ್ಕೂ ಆತಂಕ ಒಡ್ಡುವ ದೃಷ್ಟಿಯಿಂದಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಮಗೆ ಅಂಥಾ ಆಕ್ರಮಣಶೀಲ ಗುರಿಯಿಲ್ಲ ಎಂದರು.
ಪುನರ್ ವಿಮರ್ಶೆಗೆ ಹಿಂಜರಿಕೆಯಿಲ್ಲ : ಕೇಂದ್ರ ಸರ್ಕಾರದ ನೀತಿಗಳು ಜನತೆಗೆ ಸಮಾಧಾನ ತರದಿದ್ದಲ್ಲಿ , ಆ ನೀತಿಗಳ ಬಗ್ಗೆ ಪುನರ್ ವಿಮರ್ಶಿಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರದ ಆರ್ಥಿಕ ನೀತಿಗಳ ಬಗ್ಗೆ ಸ್ವದೇಶಿ ಜಾಗರಣ ಮಂಚ್ ಎತ್ತಿರುವ ಆಕ್ಷೇಪಗಳ ಕುರಿತಾದ ಪ್ರಶ್ನೆಗೆ ಅವರು ಉತ್ತರಿಸಿದರು. ಕೃಷ್ಯುತ್ಪನ್ನಗಳ ಬೆಲೆ ಕುಸಿತವನ್ನು ನಿಯಂತ್ರಿಸುವ ಕುರಿತು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದ ವಾಜಪೇಯಿ, ಡಬ್ಲ್ಯೂಟಿಓ ಬಗೆಗಿನ ಟೀಕೆಗಳನ್ನು ತಾವು ಗಮನಿಸುತ್ತಿರುವುದಾಗಿ ತಿಳಿಸಿದರು.
ಕೇಂದ್ರ ಸಚಿವರಾದ ಧನಂಜಯ ಕುಮಾರ್, ಅನಂತ ಕುಮಾರ್ ಹಾಗೂ ಉಮಾಭಾರತಿ ಮತ್ತು ಬಿಜೆಪಿಯ ರಾಜ್ಯ ಮಟ್ಟದ ನಾಯಕರು, ಸ್ಥಳೀಯ ನಾಯಕರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಆನಂತರ ಪ್ರವಾಸಿ ಬಂಗಲೆ ಸಮೀಪ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ಅವರು ಉಡುಪಿಯಲ್ಲಿ ರಾಜಾಂಗಣ ಉದ್ಘಾಟಿಸುವ ಕಾರ್ಯಕ್ರಮವಿದೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications