ಮಾರಕ ಒಪ್ಪಂದಗಳ ಪುನರ್ ಪರಿಶೀಲನೆಗೆ ಧಾರವಾಡ ರೈತರ ಒತ್ತಾಯ
ಧಾರವಾಡ : ಕೃಷ್ಯುತ್ಪನ್ನಗಳ ಬೆಲೆ ಕುಸಿತಕ್ಕೆ ಕಾರಣವಾಗಿರುವ ಗ್ಯಾಟ್, ವಿಶ್ವ ವಾಣಿಜ್ಯ ಒಪ್ಪಂದ ಹಾಗೂ ಆಮದು ಮತ್ತು ರಫ್ತು ನೀತಿಯನ್ನು ಕೇಂದ್ರ ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಜಿಲ್ಲೆಯ ರೈತರು ಆಗ್ರಹ ಪಡಿಸಿದ್ದಾರೆ.
360 ರುಪಾಯಿ ಬೆಂಬಲ ಬೆಲೆಯಲ್ಲಿ ಆಲೂಗೆಡ್ಡೆ ಖರೀದಿಗೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ನೀರಾವರಿ ಸಚಿವ ಎಚ್.ಕೆ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎ.ಎಂ. ಹಿಂಡಸಗೇರಿ ಹಾಗೂ ಜಿಲ್ಲಾಧಿಕಾರಿ ವಂದನಾ ಗುರ್ನಾನಿ ಅವರಿಗೆ ಕೃತಜ್ಞತೆ ಸಲ್ಲಿಸಲು ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ಆಗ್ರಹವನ್ನು ವ್ಯಕ್ತಪಡಿಸಲಾಯಿತು.
ಧಾರವಾಡ, ನವಲೂರು, ಕಮಲಾಪುರ, ರಾಯಪುರ, ಅಮರಗೋಳ ಮುಂತಾದ ಊರುಗಳಿಂದ ಪಕ್ಷಾತೀತವಾಗಿ ಕೃತಜ್ಞತಾ ಸುದ್ದಿಗೋಷ್ಠಿಗೆ ಆಗಮಿಸಿದ್ದ ರೈತ ಮುಖಂಡರು, ಯಾವುದೇ ಒಪ್ಪಂದ ರೈತನಿಗೆ ಮುಳುವಾಗಬಾರದು. ಇಂಥ ಮಾರಕ ಒಪ್ಪಂದಗಳಿಗೆ ಬರುವ ಯಾವುದೇ ಪಕ್ಷವಾದರೂ ಅದಕ್ಕೆ ತಮ್ಮ ವಿರೋಧವಿದೆ ಎಂದರು. ವಿಶ್ವ ವಾಣಿಜ್ಯ ಒಪ್ಪಂದದ ಪರವಿರುವ ಕೇಂದ್ರ ಸರ್ಕಾರದ ವಿರುದ್ಧ ಚಳವಳಿ ನಡೆಸುವ ಅಭಿಪ್ರಾಯ ಕೇಳಿಬಂದವು.
ಬೆಲೆ ಕುಸಿತದಿಂದ ಕಂಗಾಲಾದ ರೈತರ ನೆರವಿಗೆ ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಯೋಜನೆ ಜಾರಿಯಲ್ಲಿ ತುಸು ಏರು ಪೇರಾಗಿದ್ದರೂ ಒಟ್ಟಾರೆ ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ ಎಂದು ರೈತರು ಮುಖ್ಯಮಂತ್ರಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದರು.
ಆಮದು- ರಫ್ತು ನೀತಿ ಕುರಿತು ಕಾರ್ಯಾಗಾರ : ಡೆಂಕಲ್ ಒಪ್ಪಂದ, ಗ್ಯಾಟ್ ಹಾಗೂ ಕೇಂದ್ರ ಸರ್ಕಾರದ ಆಮದು- ರಫ್ತು ನೀತಿಯ ಕುರಿತಂತೆ ಸದ್ಯದಲ್ಲೇ ಪಕ್ಷಾತೀತ ಕಾರ್ಯಾಗಾರವೊಂದನ್ನು ಏರ್ಪಡಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಅವಳಿ ನಗರಗಳ ಮಹಾನಗರ ಪಾಲಿಕೆಯ ಮಾಜಿ ಉಪ ಮಹಾಪೌರ ದೀಪಕ್ ಚಿಂಚೋರೆ ಪ್ರಕಟಿಸಿದರು. ಕಾರ್ಯಾಗಾರದಲ್ಲಿ ಬಹುತೇಕ ರೈತರೇ ಭಾಗವಹಿಸುವಂತೆ ಪ್ರಯತ್ನ ನಡೆಸುವುದಾಗಿ ಹಾಗೂ ಕಾರ್ಯಾಗಾರದ ಕುರಿತು ಮಾತೃಭೂಮಿ ಸಂಘಟನೆಯ ಮುಖಂಡ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications