ಹುಬ್ಬಳ್ಳಿ ಐಟಿ ಪಾರ್ಕ್ ಸ್ಥಾಪನೆಗೆ ಇನ್ನು ಮೂರೇ ತಿಂಗಳು ಸಾಕು
ಧಾರವಾಡ : ಇನ್ನು ಮೂರು ತಿಂಗಳಲ್ಲಿ ಸಾಫ್ಟ್‌ವೇರ್ ಪಾರ್ಕ್ ಹುಬ್ಬಳ್ಳಿಯಲ್ಲಿ ಕಾರ್ಯಾರಂಭ ಮಾಡುವುದೆಂದು ಭಾರೀ ಕೈಗಾರಿಕೆಗಳ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಅವರು, ಇ- ಇಂಡಿಯಾ ಸಲ್ಯೂಷನ್ಸ್ ಕಂಪನಿಯ ಸಾಫ್ಟ್‌ವೇರ್ ಚಟುವಟಿಕೆಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡುತ್ತಿದ್ದರು. ಐಟಿ ಪಾರ್ಕ್‌ಗಾಗಿ ಕಟ್ಟಡ ಸ್ವಾಧೀನ ಕೆಲಸ ಮುಗಿದಿದ್ದು , 12 ಕೋಟಿ ರುಪಾಯಿ ವೆಚ್ಚದಲ್ಲಿ ಅದನ್ನು ನವೀಕರಿಸಲಾಗುವುದು. ಈ ಕೆಲಸ 3 ತಿಂಗಳೊಳಗೇ ಕೊನೆಯಾಗುತ್ತದೆ ಎಂದು ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೆರಡು ವರ್ಷಗಳಲ್ಲಿ ರಾಜ್ಯಾದ್ಯಂತ ಮಾಹಿತಿ ತಂತ್ರಜ್ಞಾನವನ್ನು ವ್ಯಾಪಕಗೊಳಿಸಲು ರಾಜ್ಯ ಸರ್ಕಾರ ನಿಶ್ಚಯಿಸಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಈಗಾಗಲೇ ಅರ್ಥ್ ಸ್ಟೇಷನ್‌ಗಳು ಕಾರ್ಯಾರಂಭ ಮಾಡಿವೆ. ಶಿವಮೊಗ್ಗ, ಬೆಳಗಾವಿ ಹಾಗೂ ಗುಲ್ಬರ್ಗಾಗಳಲ್ಲೂ ಅರ್ಥ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಸರ್ಕಾರ ಯೋಚಿಸುತ್ತಿದೆ ಎಂದರು.
ಕೆಲವು ವರ್ಷಗಳ ಹಿಂದೆ ಕೇವಲ 700 ಕೋಟಿ ರುಪಾಯಿಗಳಷ್ಟಿದ್ದ ರಾಜ್ಯದ ಸಾಫ್ಟ್‌ವೇರ್ ರಫ್ತು ಈ ವರ್ಷ 5 ಸಾವಿರ ಕೋಟಿ ರುಪಾಯಿಗಳಿಗೆ ಮುಟ್ಟಿದೆ. 2004 ರೊಳಗೆ ರಾಜ್ಯದ ಸಾಫ್ಟ್‌ವೇರ್ ರಫ್ತನ್ನು 32 ಸಾವಿರ ರುಪಾಯಿಗಳಿಗೆ ಏರಿಸಲು ಸರ್ಕಾರ ಉದ್ದೇಶಿಸಿದೆ. ಅಂತರ ಶಿಕ್ಷಣ ಯೋಜನೆಯಡಿ ಪ್ರತಿಯಾಂದು ಹಳ್ಳಿಯನ್ನು ಅಳವಡಿಸುವ ಉದ್ದೇಶದಿಂದ ಇಸ್ರೋದೊಂದಿಗೆ ಜನವರಿ 22 ರಂದು ರಾಜ್ಯ ಸರ್ಕಾರ ಒಪ್ಪಂದವೊಂದಕ್ಕೆ ಸಹಿ ಹಾಕಲಿದೆ ಎಂದು ದೇಶಪಾಂಡೆ ಹೇಳಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications