ನೀರಿಗೆ ಹಾಹಾಕಾರ ! ರಾಜ್ಯದ 22 ಸಾವಿರ ಹಳ್ಳಿಗಳಲ್ಲಿ ಜಲಕ್ಷಾಮ
ತುಮಕೂರು : ಅಂತರ್ಜಲ ಮಟ್ಟ ಆತಂಕಕಾರಿ ಮಟ್ಟದಲ್ಲಿ ಕುಸಿಯುತ್ತಿದ್ದು, ರಾಜ್ಯದಲ್ಲಿ 22 ಸಾವಿರ ಹಳ್ಳಿಗಳು ಕುಡಿಯುವ ನೀರಿನ ಕೊರತೆ ಎದುರಿಸುತ್ತಿವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಡಾ. ಬಸಪ್ಪ ರೆಡ್ಡಿ ಹೇಳಿದ್ದಾರೆ.
ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಜಿಲ್ಲೆಯ ಜಲ ಸಂಪನ್ಮೂಲಗಳು’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾ ಪಂಚಾಯಿತಿ, ರಾಜ್ಯ ವಿಜ್ಞಾನ ಪರಿಷತ್, ಜಿಲ್ಲಾ ವಿಜ್ಞಾನ ಕೇಂದ್ರ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ವಿಚಾರ ಸಂಕಿರಣವನ್ನು ಜಂಟಿಯಾಗಿ ಏರ್ಪಡಿಸಿದ್ದವು.
ತುಮಕೂರಿನಲ್ಲಿ ಒಂದು ಲಕ್ಷ ಕೊಳವೆಬಾವಿಗಳನ್ನು ಕೊರೆದಿದ್ದು, ರಾಜ್ಯದಲ್ಲಿ ಅತ್ಯಂತ ಹೆಚ್ಚಿನ ಕೊಳವೆಬಾವಿಗಳನ್ನು ಹೊಂದಿರುವ ಮೊದಲ ಮೂರು ಜಿಲ್ಲೆಗಳಲ್ಲಿ ತುಮಕೂರೂ ಒಂದಾಗಿದೆ ಎಂದರು. ಗುಬ್ಬಿ ತಾಲ್ಲೂಕಿನಲ್ಲಿ ಅಂತರ್ಜಲ ಮಟ್ಟ ಅಭಿವೃದ್ಧಿಗೆ 30 ಲಕ್ಷ ರುಪಾಯಿ ವೆಚ್ಚದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಯಥೇಚ್ಛವಾಗಿ ಕೊಳವೆಬಾವಿಗಳನ್ನು ಕೊರೆಯುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ರಾಸಾಯಿನಿಕ ಗೊಬ್ಬರದ ಬಳಕೆ, ತಿಪ್ಪೆಗಳಲ್ಲಿನ ತೇವಾಂಶ ಭೂಮಿಯಲ್ಲಿ ಇಂಗುತ್ತಿರುವುದರಿಂದ ಅಂತರ್ಜಲ ಕಲ್ಮಶವಾಗುತ್ತಿದೆ ಎಂದು ವಿಷಾದಿಸಿದ ಬಸಪ್ಪ ರೆಡ್ಡಿ ಅವರು, ನೀರನ್ನು ಸ್ವಚ್ಛವಾಗಿಡುವ ಅಗತ್ಯದ ಬಗ್ಗೆ ಜನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications