ಫೆಬ್ರವರಿಯಿಂದ ಬೆಂಗಳೂರು- ಮೈಸೂರುಕಾರಿಡಾರ್ ಕೆಲಸ ಆರಂಭ
ಬೆಂಗಳೂರು : ಮುಂದಿನ ತಿಂಗಳಿನಿಂದ ಬೆಂಗಳೂರು- ಮೈಸೂರು ನಡುವಿನ ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿ ಆರಂಭವಾಗಲಿದೆ ಎಂದು ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ.
ಅವರು ಸೋಮವಾರ ಶಿವಾಜಿ ನಗರ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈಗಿರುವ ಹೆದ್ದಾರಿಯನ್ನು ಅಂತರ ರಾಷ್ಟ್ರೀಯ ಮಟ್ಟಕ್ಕೆ ಏರಿಸಲಾಗುತ್ತಿದ್ದು, ಕಾರಿಡಾರ್ ಕಾಮಗಾರಿಯನ್ನು ಬೆಂಗಳೂರು ಮತ್ತು ಮಂಡ್ಯದಲ್ಲಿ ಏಕ ಕಾಲಕ್ಕೆ ಆರಂಭಿಸಬೇಕೆಂಬ ಷರತ್ತಿನ ಪ್ರಕಾರ ಕೆಲಸ ಆರಂಭಿಸಲಾಗುವುದು.
ಕಾರಿಡಾರ್ನಲ್ಲಿ ಸುಂಕ ನೀಡಲು ಶಕ್ತರಾದವರು ಮಾತ್ರ ಪ್ರಯಾಣಿಸಬಹುದು. ಶ್ರೀ ಸಾಮಾನ್ಯರಿಗೆ ಇದು ಕಷ್ಟ ಸಾಧ್ಯವಾದ್ದರಿಂದ, ಎಲ್ಲರಿಗೂ ಅನುಕೂಲವಾಗುವಂತೆ ಈಗಿರುವ ಬೆಂಗಳೂರು -ಮೈಸೂರು ರಸ್ತೆಯನ್ನು ಅಗಲಗೊಳಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರ ಬಸ್ ನಿಲ್ದಾಣದ ಸುತ್ತ ಮುತ್ತಲಿನ ರಸ್ತೆಗಳಿಗೆ ಡಾಂಬರೀಕರಣದ ಬದಲಾಗಿ ಕಾಂಕ್ರೀಟ್ ಹಾಕಲು ತೀರ್ಮಾನಿಸಲಾಗಿದೆ ಎಂದ ಕೃಷ್ಣ 15ರಿಂದ 20 ವರ್ಷ ಬಾಳಿಕೆ ಬರುವಂತೆ, ಉತ್ತಮ ಗುಣಮಟ್ಟದ ಕಾಂಕ್ರೀಟ್ ಹಾಕುವಂತೆ ಪಾಲಿಕೆ ಅಧಿಕಾರಿಗಳಿಗೆ ಆದೇಶ ನೀಡಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications