ಟಾಸ್ಕ್‌ಫೋರ್ಸ್ ಕಾರ್ಯವೈಖರಿ- ನಿಮ್ಮ ಫೀಡ್‌ಬ್ಯಾಕ್
ಬೆಂಗಳೂರು : ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಹಲವು ಹತ್ತು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಶ್ರಮಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಕಾರ್ಯಪಡೆಯ ಕಾರ್ಯವೈಖರಿ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಯೋಜನೆ ಯಾವುದೇ ಇರಲಿ, ಅದರ ಗಾತ್ರ-ಪಾತ್ರ ಎಷ್ಟೇ ಇರಲಿ, ಅಂತಿಮವಾಗಿ ಅದು ಜನಮುಖಿ ಆಗಿರಬೇಕಾದುದರಿಂದ ನಮ್ಮ ನಿಮ್ಮ ಪ್ರತಿಕ್ರಿಯೆ ಅತಿ ಮುಖ್ಯ. ಇದನ್ನು ಮನಗಂಡ ಟಾಸ್ಕ್‌ಫೋರ್ಸ್‌ನ ರೂವಾರಿಗಳು ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸುವ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ.
ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಕಾರ್ಯಪಡೆಯ ಆಡಳಿತ ಮಂಡಳಿ ಮಂಗಳವಾರ ಬೆಂಗಳೂರಿನಲ್ಲಿ ಸಭೆ ಸೇರಿ ಸಮಾವೇಶ ಹಮ್ಮಿಕೊಳ್ಳುವ ನಿರ್ಧಾರ ಕೈಗೊಂಡಿತು.
ಕಳೆದ ಒಂದು ವರ್ಷ ಅವಧಿಯಲ್ಲಿ ಕೊಟ್ಟ ಭರವಸೆಗಳ ಈಡೇರಿಕೆ ಮತ್ತು ಈಡೇರಿಸಬೇಕಾದ ಯೋಜನೆಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಕೋರುವುದು ಸಮಾವೇಶದ ಉದ್ದೇಶ. ಈ ಸಮಾವೇಶ ಫೆಬ್ರವರಿ 24 ರಂದು ಬೆಂಗಳೂರಿನಲ್ಲಿ ನಡೆಯುತ್ತದೆ.
ಪಾರದರ್ಶಕ ಹಾಗೂ ದೂರದೃಷ್ಟಿಯ ಅಭಿವೃದ್ಧಿ ಕಾರ್ಯಪಡೆ ವಿಶಿಷ್ಠವಾಗಿದೆ ಹಾಗೂ ಪ್ರಗತಿ ಪಥದಲ್ಲಿದೆ ಎಂದು ಸಭೆಯ ನಂತರ ಕಾರ್ಯಪಡೆಯ ಅಧ್ಯಕ್ಷ ನಂದನ್ ನಿಲೇಕಣಿ ಹಾಗೂ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಅಭಿವೃದ್ಧಿಯ ಬೀಜಮಂತ್ರವನ್ನು ಕೇವಲ ರಾಜಧಾನಿಗೆ ಸೀಮಿತಗೊಳಿಸಲಾಗದು. ರಾಜ್ಯದ ಇತರ ನಗರ, ಪಟ್ಟಣ ಪ್ರದೇಶಗಳಿಗೂ ಕೊಂಡೊಯ್ಯಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಈಗಾಗಲೇ ಇಂಥ ಪಡೆ ಮಂಗಳೂರಿನಲ್ಲಿ ಕಾರ್ಯೋನ್ಮುಖವಾಗಿದೆ. ಮೈಸೂರು, ಗದಗ, ಗುಲ್ಬರ್ಗ ಮುಂತಾದ ಪ್ರದೇಶಗಳಲ್ಲಿ ಕಾರ್ಯಪಡೆ ಆರಂಭಿಸಲಾಗುವುದು ಎಂದರು ಅವರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications