ನಡುಗಿಸುತ್ತಿರುವ ಶಿಶಿರದ ಚಳಿ
ಬೆಂಗಳೂರು : ನಾಳೆ ಅಮಾವಾಸ್ಯೆ. ಪುಷ್ಯ ಮಾಸದ ಅಂತ್ಯ. ನಾಡಿದ್ದಿನಿಂದ ಮಾಘ ಮಾಸ. ಮಾಘ - ಫಾಲ್ಗುಣ ಹೇಳಿಕೇಳಿ ಶಿಶಿರ ಋತುವಿನ ಕಾಲ. ಅಂದರೆ ಚಳಿ ಏರಿಳಿಯುತ್ತದೆ. ಮಾಗಿಯ ಚಳಿಯ ಕೊರೆತದ ಅನುಭವವೂ ಆಗುತ್ತದೆ. ಹಣ್ಣೆಲೆಗಳೆಲ್ಲ ಉದುರುತ್ತವೆ. ಮೈಯೆಲ್ಲಾ ಒಡೆಯುತ್ತದೆ. ವ್ಯಾಸಲಿನ್ ಬಯಸುತ್ತದೆ. ಚೈತ್ರದ ಹೊಸ ಚಿಗುರು ಕಾಣಲು ಮನ ಹಾತೊರೆಯುತ್ತದೆ.
ಅಂದಹಾಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ಒಣಹವೆಯ ಕಾರುಭಾರಿನ ನಡುವೆಯೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಇಳಿಮುಖವಾಗಿದೆ. ಉತ್ತರ ಒಳನಾಡಿನ ಹಲವೆಡೆ ಅದು ಸಾಮಾನ್ಯ ಮಟ್ಟಕ್ಕಿಂತಲೂ ಕಡಿಮೆ ಇತ್ತು. ಆದರೆ, ಕರಾವಳಿಯಲ್ಲಿ ಸಾಮಾನ್ಯ ಮಟ್ಟದಲ್ಲಿತ್ತು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 11.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದುವೆ ರಾಜ್ಯದ ಅತಿ ಕನಿಷ್ಠ ತಾಪಮಾನ. ಮುನ್ಸೂಚನೆಯಂತೆ ಗುರುವಾರ ಬೆಳಗಿನವರೆಗೂ ಬಹುತೇಕ ರಾಜ್ಯದಲ್ಲಿ ಒಣಹವೆಯೇ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದಿರುತ್ತದೆ. ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ಗೆ ತಲುಪಲಿದೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications