ಮೈಸೂರಿನಲ್ಲಿ ಫೆಬ್ರವರಿ ಮೂರನೇ ವಾರ ವಚನ ಸಂಗೀತೋತ್ಸವ
ಮೈಸೂರು : ಫೆಬ್ರವರಿ ಮೂರನೇ ವಾರದಲ್ಲಿ ಪ್ರಪ್ರಥಮ ವಚನ ಸಂಗೀತೋತ್ಸವ ಮೈಸೂರಿನಲ್ಲಿ ಜರುಗಲಿದೆ. ಈ ಸಂಗೀತೋತ್ಸವಕ್ಕಾಗಿ ಸರಕಾರ ಒಂದು ಲಕ್ಷ ರುಪಾಯಿ ಬಿಡುಗಡೆ ಮಾಡಿದೆ. ಎರಡು ದಿನಗಳ ಕಾಲ ಮೈಸೂರಿಗರಿಗೆ ವಚನ ಗಾನಾಮೃತ ಸವಿಯುವ ಅವಕಾಶ ಲಭ್ಯವಾಗಲಿದೆ.
ಈ ವಿಷಯವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವೆ ರಾಣಿ ಸತೀಶ್ ಮೈಸೂರಿನಲ್ಲಿ ಬುಧವಾರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ದಾಸ ಸಾಹಿತ್ಯದ ಸಮಗ್ರ ಸಂಪುಟವೊಂದನ್ನು ಸಹ ಹೊರತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಪುರಂದರದಾಸರ ಪುಣ್ಯದಿನವಾದ ಬುಧವಾರ ತಿಳಿಸಿದರು. ಅಲ್ಲದೆ ಹಂಪೆಯ ಪುರಂದರ ಮಂಟಪದಲ್ಲಿ ಒಂದು ದಿನದ ಪುರಂದರ ಉತ್ಸವವನ್ನು ಸಹ ಆಚರಿಸಲಾಗುವುದೆಂದರು.
ಕುವೆಂಪು ಭವನ: ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿ ಫೆಬ್ರವರಿ 2ನೇ ತಾರೀಖು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಕುವೆಂಪು ಭವನವನ್ನು ಉದ್ಘಾಟಿಸಲಿದ್ದಾರೆ ಎಂದ ಅವರು ಗಡಿನಾಡು ಹಾಗೂ ಜಿಲ್ಲಾ ಉತ್ಸವಗಳಿಗೆ ತಲಾ 50 ಸಾವಿರ ರುಪಾಯಿ ನೀಡಲಾಗುತ್ತಿದೆ, ಕನ್ನಡ ಸಂಸ್ಕೃತಿಯನ್ನು ಪ್ರಚುರ ಪಡಿಸಲು ಸ್ಥಳೀಯರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮಡಿಕೇರಿಯಲ್ಲಿರುವ ವೀರರಾಜೇಂದ್ರ ಹಾಗೂ ದಿವಾನರ ಗದ್ದುಗೆಗಳ ಪುನಶ್ಚೇತನಕ್ಕೆ 10 ಲಕ್ಷ ರುಪಾಯಿ ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ದನಗೂರಿನಲ್ಲಿ ಉಪ್ಪಿನ ಷಡಕ್ಷರಿ ಅವರ ಹೆಸರಿನಲ್ಲಿ ಬಯಲು ರಂಗಮಂದಿರ ನಿರ್ಮಿಸಲು 1 ಲಕ್ಷ ರುಪಾಯಿ ಬಿಡುಗಡೆಗೊಳಿಸಲಾಗಿದೆ ಎಂಬ ವಿವರಗಳನ್ನೂ ಸಚಿವೆ ನೀಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications