ಉನ್ನತ ಶಿಕ್ಷಣದಲ್ಲಿ ಮೀಸಲಾತಿಗೆ ಸರ್ಕಾರದ ತಾತ್ವಿಕ ಒಪ್ಪಿಗೆ
ಬೆಂಗಳೂರು : ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪ್ರವೇಶ ಸಂದರ್ಭದಲ್ಲಿ ಮೀಸಲಾತಿ ನೀಡಲು ಸರಕಾರ ತಾತ್ವಿಕ ಒಪ್ಪಿಗೆ ನೀಡಿದೆ.
ಆದರೆ ಎಷ್ಟು ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ನಿರ್ಧರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಪದವಿ ತರಗತಿಗಳಲ್ಲಿ ಭಾರತ ಸಂವಿಧಾನಕ್ಕೆ ಸಂಬಂಧಿಸಿದಂತೆ 100 ಅಂಕಗಳ ಒಂದು ಪತ್ರಿಕೆಯನ್ನು ಅಳವಡಿಸುವ ಉದ್ದೇಶ ಸರಕಾರದ ಮುಂದಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ವ್ಯವಸ್ಥೆ ಜಾರಿಗೆ ಬಂದರೆ, ವಿದ್ಯಾರ್ಥಿಗಳಿಗೆ ಸಂವಿಧಾನ ಅಧ್ಯಯನ ಅವಕಾಶ ಮಾಡಿಕೊಡುವ ಮೊದಲ ರಾಜ್ಯ ಕರ್ನಾಟಕ ಎನಿಸಿಕೊಳ್ಳುತ್ತದೆ ಎಂದು ಸಚಿವರು ಹೇಳಿದರು.
ಹೊಸದಾಗಿ ಆರಂಭಿಸಲು ಉದ್ದೇಶಿಸಿರುವ 41 ಇಂಜಿನಿಯರಿಂಗ್ ಕಾಲೇಜುಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಯ ಒಪ್ಪಿಗೆ ಸಿಕ್ಕ ನಂತರ ಇಂಜಿನಿಯರಿಂಗ್ ಸೀಟುಗಳ ಸಂಖ್ಯೆ 11 ಸಾವಿರ ಮಾಹಿತಿ ತಂತ್ರಜ್ಞಾನ ಸೀಟುಗಳೂ ಸೇರಿದಂತೆ ಒಟ್ಟು 20 ಸಾವಿರ ತಲುಪುತ್ತದೆ ಎಂದು ಪರಮೇಶ್ವರ್ ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications