Get Updates
Get notified of breaking news, exclusive insights, and must-see stories!

ಬಿಜೆಪಿ ನಾಯಕಿ ರಾಜಮಾತೆ ವಿಜಯರಾಜೇ ಸಿಂಧಿಯಾ ಇನ್ನಿಲ್ಲ

ನವದೆಹಲಿ : ಬಿಜೆಪಿ ಹಿರಿಯ ನಾಯಕಿ ವಿಜಯರಾಜೇ ಸಿಂಧಿಯಾ ಗುರುವಾರ ಮುಂಜಾನೆ ಕೊನೆಯುಸಿರೆಳೆದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ 23 ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ರಾಜಮಾತೆ, ದೆಹಲಿಯ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಗುರುವಾರ ರಾತ್ರಿ ಸಿಂಧಿಯಾ ಅವರ ಮೂತ್ರ ಕೋಶ ಮತ್ತು ಪಿತ್ತಜನಕಾಂಗಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದರಿಂದ ಅವರ ಸ್ಥಿತಿ ಹದಗೆಟ್ಟಿತ್ತು. ಬೆಳಗಿನ ಜಾವ 3.20 ಕ್ಕೆ ಅವರು ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ವಿಜಯಾರಾಜೇ ಸಿಂಧಿಯಾ ಅವರು ಕೇಂದ್ರ ಸಚಿವೆ ವಸುಂಧರಾ ರಾಜೇ ಸಿಂಧಿಯಾ ಸೇರಿದಂತೆ ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಜನವರಿ 27ರ ಶನಿವಾರದಂದು ಅವರ ಅಂತ್ಯ ಸಂಸ್ಕಾರ ಕ್ರಿಯೆಗಳು ನಡೆಯಲಿವೆ.

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+