ವೀರಪ್ಪನ್ ಜೊತೆಯಿರುವುದು ಯಾರೋ ಗೊತ್ತಿಲ್ಲ - ಚೆನ್ನೈನಲ್ಲಿ ಡಾ. ರಾಜ್
ಚೆನ್ನೈ : ವರನಟ ಡಾ. ರಾಜ್ಕುಮಾರ್ ಶುಕ್ರವಾರ ಬೆಳಿಗ್ಗೆ ಚೆನ್ನೈಗೆ ಆಗಮಿಸಿದ್ದು, ಅವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರನ್ನು ಭೇಟಿಯಾಗುವ ಸಂಭವವಿದೆ.
ವೀರಪ್ಪನ್ ಬಂಧನದಿಂದ ತಮ್ಮನ್ನು ರಕ್ಷಿಸಿದ್ದಕ್ಕಾಗಿ ಕರುಣಾನಿಧಿ ಅವರಿಗೆ ಧನ್ಯವಾದ ಹೇಳುವುದು ರಾಜ್ ಭೇಟಿಯ ಉದ್ದೇಶವೆಂದು ವ್ಯಾಖ್ಯಾನಿಸಲಾಗುತ್ತಿದೆ. ರಾಜ್ ಬಿಡುಗಡೆಯಾದ ನಂತರ ತಾವು ಶೀಘ್ರದಲ್ಲೇ ಚೆನ್ನೈಗೆ ಬರುವುದಾಗಿ ಕರುಣಾನಿಧಿ ಅವರಿಗೆ ಸಂದೇಶ ಕಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಪುತ್ರ ರಾಘವೇಂದ್ರ ರಾಜ್ಕುಮಾರ್ ಹಾಗೂ ಪ್ರಸಿದ್ಧ ನಾಯಕನಟ ರವಿಚಂದ್ರನ್ರೊಂದಿಗೆ ಚೆನ್ನೈನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಜ್, ತಮ್ಮದು ಖಾಸಗಿ ಭೇಟಿ ಎಂದರು. ಆರೋಗ್ಯ ತಪಾಸಣೆಗಾಗಿ ಇಲ್ಲಿಗೆ ಬಂದಿರುವುದಾಗಿ ಅವರು ಪ್ರಶ್ನೆಯಾಂದಕ್ಕೆ ಉತ್ತರಿಸಿದರು.
ವೀರಪ್ಪನ್ ಒಳ್ಳೆಯ ಮನುಷ್ಯ, ತಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡ ಎಂದು ವೀರಪ್ಪನ್ ಆತಿಥ್ಯದ ಬಗ್ಗೆ ಪ್ರಶ್ನಿಸಿದ ಸುದ್ದಿಗಾರರಿಗೆ ತಿಳಿಸಿದ ರಾಜ್, ವೀರಪ್ಪನ್ನೊಂದಿಗೆ ತುಂಬಾ ಜನರಿದ್ದಾರೆ. ಆದರೆ, ಅವರು ಭಯೋತ್ಪಾದಕರೋ ಅಲ್ಲವೋ ತಮಗೆ ತಿಳಿಯದು ಎಂದರು. ವೀರಪ್ಪನ್ ಬೇಡಿಕೆಗಳ ಬಗ್ಗೆ ನಿರ್ಧರಿಸಬೇಕಾದುದು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳಿಗೆ ಸೇರಿದುದು ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications