ಏಕ ಪುರುಷನಂತೆ ನೆರವಿಗೆ ಧಾವಿಸಲು ರಾಷ್ಟ್ರಪತಿ- ಪ್ರಧಾನಿ ಮನವಿ
ನವದೆಹಲಿ : ಗುಜರಾತ್‌ನ ಭೂಕಂಪ ಪೀಡಿತ ಸಂತ್ರಸ್ತರಿಗೆ ದೇಶಬಾಂಧವರು ಉದಾರವಾಗಿ ನೆರವು ನೀಡಬೇಕು ಎಂದು ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಮನವಿ ಮಾಡಿದ್ದಾರೆ.
ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ಸಂಭವಿಸಿರುವ ಭೂಕಂಪದ ಸುದ್ದಿ ಕೇಳಿ ಆಘಾತವಾಯಿತು. ಸಾವಿರಾರು ಜನರ ಜೀವಹಾನಿ ತಮಗೆ ಅಪಾರ ನೋವು ತಂದಿದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಸರ್ಕಾರ ಹಾಗೂ ಜನತೆಯ ಏಕ ಪ್ರಯತ್ನದಿಂದ ಸಂತ್ರಸ್ತರಿಗೆ ಶೀಘ್ರದಲ್ಲೇ ನೆಮ್ಮದಿ ದೊರೆಯುವುದೆಂದು ಅವರು ಆಶಿಸಿದ್ದಾರೆ. ಉಪ ರಾಷ್ಟ್ರಪತಿ ಕೃಷ್ಣಕಾಂತ್ ಕೂಡ ಸಂತ್ರಸ್ತರ ಕುರಿತು ಶೋಕ ವ್ಯಕ್ತಪಡಿಸಿದ್ದಾರೆ.
ಏಕ ಪುರುಷನಂತೆ ಒಂದಾಗಿ : ಶುಕ್ರವಾರ ಇಳಿಸಂಜೆ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ವಾಜಪೇಯಿ, ಪ್ರಾಕೃತಿಕ ದುರಂತದಿಂದ ತಮಗೆ ಆಘಾತವಾಗಿದೆ. ಆದರೆ, ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಅಗತ್ಯ ಬಿದ್ದರೆ ಭೂಕಂಪವನ್ನು ರಾಷ್ಟ್ರೀಯ ದುರಂತವಾಗಿ ಪರಿಗಣಿಸಲಾಗುವುದು ಎಂದು ಹೇಳಿದ ಪ್ರಧಾನಿ, ನೊಂದವರಿಗೆ ನೆರವು ನೀಡಲು ದೇಶದೆಲ್ಲಾ ಬಾಂಧವರು ಏಕಪುರುಷನಂತೆ ಒಂದಾಗಬೇಕು ಎಂದು ಮನವಿ ಮಾಡಿದ್ದಾರೆ.
ಪಾಕಿಸ್ತಾನದ ಸರ್ವಾಧಿಕಾರಿಯ ಶೋಕ : ಭೂಕಂಪ ಪೀಡಿತ ಸಂತ್ರಸ್ತ ಭಾರತೀಯರ ನೋವಿನಲ್ಲಿ ಪಾಕಿಸ್ತಾನಿ ಸರ್ಕಾರ ಹಾಗೂ ಜನತೆ ಭಾಗಿಯಾಗುತ್ತದೆ ಎಂದು ಪಾಕಿಸ್ತಾನದ ಸೇನಾಡಳಿತಗಾರ ಪರ್ವೇಜ್ ಮುಷ್ರಾಫ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಅವರು ಈ ಕುರಿತಂತೆ ಭಾರತದ ಪ್ರಧಾನಿಗೆ ಪತ್ರ ಬರೆದಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications