ಗುಜರಾತ್ ಭೂಕಂಪ : ರಾಜ್ಯದಿಂದ ಐದು ಕೋಟಿರೂಪಾಯಿ ನೆರವು
ಬೆಂಗಳೂರು : ಗುಜರಾತ್ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ನೆಲ ಕಚ್ಚಿರುವ ಕುಟುಂಬಗಳಿಗೆ ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದಿಂದ ಐದು ಕೋಟಿ ರೂಪಾಯಿ ನೆರವು ಘೋಷಿಸಲಾಗಿದೆ.
ಶನಿವಾರ ಸಂಜೆ ಕಾನೂನು ಮತ್ತು ಸಂಸದೀಯ ಸಚಿವ ಡಿ.ಬಿ. ಚಂದ್ರೇ ಗೌಡ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಈ ಮೊತ್ತದಲ್ಲಿ ಈಗಾಗಲೇ ಎರಡು ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ. ಬೆಳಗಾವಿ ಮತ್ತು ಚಿತ್ರದುರ್ಗದಿಂದ 45 ಲಕ್ಷ ರೂಪಾಯಿ ಮೌಲ್ಯದ ಎಂಟು ಸಾವಿರ ಕಂಬಳಿ ಮತ್ತು ಬೆಚ್ಚನೆಯ ವಸ್ತ್ರಗಳನ್ನು ರವಾನಿಸಲಾಗಿದೆ. ಸಿದ್ದ ಆಹಾರ, ಜೋಳ, ಅಕ್ಕಿ, ಬೇಳೆ, ಆಲೂಗಡ್ಡೆ ಮತ್ತು ಔಷಧಿಗಳನ್ನೂ ಕಳುಹಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನ ಸಂಜಯ ಗಾಂಧಿ ಅಪಘಾತ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸದಾಶಿವ ಮೂರ್ತಿ ಅವರ ನೇತೃತ್ವದಲ್ಲಿ 13 ಮಂದಿ ಮೂಳೆ ತಜ್ಞರ ಮತ್ತು ಅರಿವಳಿಕೆ ತಜ್ಞರ ತಂಡ ದುರಂತ ಸ್ಥಳಕ್ಕೆ ಧಾವಿಸಿದೆ. ಖಾಸಗಿ ವೈದ್ಯರ ತಂಡವೊಂದು ಇಷ್ಟರಲ್ಲೇ ಗುಜರಾತ್ಗೆ ಹೊರಡಲಿದೆ. ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳಲು ರಾಜ್ಯದಿಂದ ಸಚಿವರೊಬ್ಬರನ್ನು ಕಳುಹಿಸಲಾಗುವುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications