ಮೈಸೂರು ಒಡೆಯರ್ ನಿವಾಸದಿ ಬೆಳಗಿದ ವಿದ್ಯುತ್ ದೀಪಗಳು
ಮೈಸೂರು : ದಂಡಿನಲ್ಲಿ ಸೋದರ ಮಾವನೆ ಎಂಬಂತೆ ವಿದ್ಯುತ್ ಬಿಲ್ ಬಾಕಿ ಕಟ್ಟದ ಕಾರಣಕ್ಕಾಗಿ ಕಡಿತಗೊಳಿಸಲಾಗಿದ್ದ ಮೈಸೂರು ಅರಮನೆಯ ಒಂದು ಭಾಗದಲ್ಲಿರುವ ರಾಜ ವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಬಂಧುಗಳ ನಿವಾಸಗಳಲ್ಲಿ ಭಾನುವಾರ ಮತ್ತೆ ವಿದ್ಯುತ್ ದೀಪಗಳು ಪ್ರಕಾಶಿಸಿದವು.
ಸುಮಾರು 18 ಲಕ್ಷ ರುಪಾಯಿ ಬಾಕಿ ಕಟ್ಟಿಲ್ಲ ಎಂಬ ಕಾರಣಕ್ಕಾಗಿ ವಿದ್ಯುತ್ ಸಂಪರ್ಕವನ್ನು ಕೆ.ಪಿ.ಟಿ.ಸಿ.ಎಲ್. ಕಡಿತ ಮಾಡಿತ್ತು. ಅರಮನೆ ವಿವಾದವು ನ್ಯಾಯಾಲಯದಲ್ಲಿ ಇರುವ ಕಾರಣ ತಾವು ವಿದ್ಯುತ್ ಬಾಕಿ ಕಟ್ಟುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂಬುದು ಒಡೆಯರ್ ಅವರ ವಾದವಾಗಿತ್ತು.
ಈ ಮಧ್ಯೆ ಅರಮನೆಯ ರಾಜ ವಂಶಸ್ಥರ ಮನೆಗಳಿಗೆ ಸೋಮವಾರದೊಳಗೆ ವಿದ್ಯುತ್ ಪೂರೈಸದಿದ್ದರೆ, ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಅರಸು ಮಹಾಸಭಾ ಎಚ್ಚರಿಕೆಯನ್ನೂ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ವಿ.ಪಿ. ಬಾಳಿಗಾರ್ ಅವರು ಒಡೆಯರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ತರುವಾಯ ಕಡಿತಗೊಳಿಸಲಾಗಿದ್ದ ವಿದ್ಯುತ್ ಅನ್ನು ಮತ್ತೆ ಪೂರೈಸುವ ನಿರ್ಧಾರ ಕೈಗೊಂಡರು. ಈ ವಿಷಯವನ್ನು ತಿಳಿಸಿರುವ ಅರಸು ಮಹಾ ಸಭಾದ ಅಧ್ಯಕ್ಷ ನಂದೀಶ್ ಅವರು, ತಮ್ಮ ಕೋರಿಕೆ ಈಡೇರಿದ ಹಿನ್ನೆಲೆಯಲ್ಲಿ ಉದ್ದೇಶಿತ ಚಳವಳಿಯನ್ನು ಕೈಬಿಡಲಾಗಿದೆ ಎಂದೂ ತಿಳಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications