ರಾಜ್ಯದ ಮೇಲೆ ಚಳಿಯ ಅಲೆಯ ಕುಳಿರ್ಗಾಳಿ
ಬೆಂಗಳೂರು : ಭಾರತದೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಯುದ್ಧವನ್ನೇ ಸಾರಿರುವ ಪಾಕಿಸ್ತಾನದ ಕಲ್ಲೆದೆಯೂ ಕರಗಿದೆ. ಪಾಕಿಸ್ತಾನ ಕೂಡ ಗುಜರಾತ್ ಭೂಕಂಪ ಸಂತ್ರಸ್ತರ ನೆರವಿಗೆ ಮುಂದಾಗುವ ನಿರ್ಧಾರ ತಳೆದಿದೆ. ಮನೆ, ಮಾರು, ಮಡದಿ ಮಕ್ಕಳನ್ನು ಕಳೆದುಕೊಂಡು ನಿರ್ಗತಿಕರಾದವರಿಗೆ ದೇಶ ವಿದೇಶಗಳಿಂದ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಕೊರೆಯುತ್ತಿರುವ ಚಳಿಯಲ್ಲೂ ಪರಿಹಾರ ಕಾಮಗಾರಿಗಳೂ ಸಮರೋಪಾದಿಯಲ್ಲಿ ಸಾಗಿವೆ.
ಭಾನುವಾರ ಬೆಳಗ್ಗೆಯೂ ಸಹ ಮುಂಬಯಿ ಹಾಗೂ ಅಹಮದಾಬಾದ್‌ಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ಭೂಕಂಪದ ಭೀತಿಯಿಂದ ದೇಶವೇ ನಡುಗುತ್ತಿರುವಾಗ ಶೀತಮಾರುತವೂ ಹಗ್ಗ ಕಂಡು ಹೆದರಿದವರ ಮೈ ಮೇಲೆ ಹಾವನ್ನೇ ಎಸೆದಂತೆ ತಮ್ಮ ಪ್ರತಾಪವನ್ನೂ ಈ ಸಂದರ್ಭದಲ್ಲೇ ತೋರಿದೆ.
ರಾಜ್ಯದ ಮೇಲೂ ಉತ್ತರದ ಕಡೆಯಿಂದ ಶೀತ ಮಾರುತಗಳು ಬೀಸುತ್ತಿವೆ. ರಾಜ್ಯದಲ್ಲಿ ಎಂದಿನಂತೆ ಒಣಹವೆ ಮುಂದುವರಿದಿದೆಯಾದರೂ ಚಳಿಯ ಅಲೆಗಳಿಂದ ಕೂಡಿದ ಕುಳಿರ್ಗಾಳಿ ಬೀಸುತ್ತಿದೆ. ತತ್ಪರಿಣಾಮವಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ ಕುಸಿತ ಕಂಡಿದೆ.
ಉತ್ತರ ಒಳನಾಡಿನ ಕೆಲವೆಡೆ ಮಾತ್ರ ಕನಿಷ್ಠ ತಾಪಮಾನ ಅಧಿಕವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಲ್ಪ ಬದಲಾವಣೆ ಕಂಡುಬಂದಿದೆ. ರಾಜ್ಯದ ಅತಿ ಕನಿಷ್ಠ ಉಷ್ಣಾಂಶ 10.4 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ. ಚಳಿಯ ಅಲೆಗಳಿಂದ ಕೂಡಿದ ಕುಳಿರ್ಗಾಳಿಯೂ ಬೀಸಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸೂಚನೆ ದೊರೆತಿದೆ. ಭಾನುವಾರ ಬೆಳಗ್ಗೆ 11 ಗಂಟೆಯ ಸಮಯದಲ್ಲೂ ಬೆಂಗಳೂರಿನಲ್ಲಿ ಚಳಿಯ ಅನುಭವ ಆಗುತ್ತಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications