ಎಲ್ಲಿದ್ದಾರೆ ಪ್ರತಿಭಾವಂತ ಕನ್ನಡ ವಿದ್ಯಾರ್ಥಿಗಳು? ಸಿಂಧ್ಯಾ ವಿಷಾದ
*ಉದಾತ್ ಡಿ. ಭಾರದ್ವಾಜ್
ಬೆಂಗಳೂರು : ಕನ್ನಡ ನೆಲದಲ್ಲೇ ಕನ್ನಡ ಮಾಧ್ಯಮ ವಿದ್ಯಾರ್ಥಿಗಳನ್ನು ಹುಡುಕಿ ಪ್ರಶಸ್ತಿ ನೀಡಬೇಕಾದ ಪರಿಸ್ಥಿತಿ ನೆಲೆಗೊಂಡಿದೆ ಎಂದು ವಿಧಾನಸಭೆಯ ಜನತಾದಳ ಸಂಯುಕ್ತ ಪಕ್ಷದ ಮುಖಂಡ ಪಿಜಿಆರ್ ಸಿಂಧ್ಯಾ ಕಳವಳ ವ್ಯಕ್ತ ಪಡಿಸಿದ್ದಾರೆ.
ಅ.ನ.ಕೃ ಪ್ರತಿಷ್ಠಾನ ಮತ್ತು ನಿರ್ಮಾಣ್ ಶೆಲ್ಟರ್ಸ್ ಸ್ವಯಂ ಸೇವಾ ಸಂಸ್ಥೆ ಇತ್ತೀಚೆಗೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು. ಇಂದಿನ ಶೈಕ್ಷಣಿಕ ಸನ್ನಿವೇಶದಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಎಲ್ಲಿಲ್ಲದ ಮಹತ್ವ ನೀಡಲಾಗುತ್ತಿದೆ. ಈ ಕ್ಷೇತ್ರಕ್ಕೆ ಇಂಗ್ಲೀಷ್ ಅನಿವಾರ್ಯವೆಂಬ ಭ್ರಮೆಯನ್ನು ಬಿತ್ತಲಾಗುತ್ತಿದೆ ಎಂದರು.
ಚೀನಾ, ಜಪಾನ್, ಜರ್ಮನಿಯಂತಹ ದೇಶಗಳು ಇಂಗ್ಲಿಷಿನ ಹಂಗಿಲ್ಲದೆ ತಾಂತ್ರಿಕ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಈ ಅಂಶವನ್ನು ನಾವು ಗಮನಿಸಬೇಕು. ತಾಂತ್ರಿಕ ಪ್ರಗತಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಬಲಿಕೊಡಬೇಕಾದ ಅಗತ್ಯವಿಲ್ಲ . ಈ ನಿಟ್ಟಿನಲ್ಲಿ ಅ.ನ.ಕೃ . ಪ್ರತಿಷ್ಠಾನ ಮತ್ತು ನಿರ್ಮಾಣ್ ಶೆಲ್ಟರ್ಸ್ ಹಮ್ಮಿಕೊಂಡಿರುವ ಇಂತಹ ಯೋಜನೆ ಸ್ತುತ್ಯ ಎಂದ ಸಿಂಧ್ಯ, ಆಡಳಿತ ಸುಧಾರಣೆಗೆ ಮಹತ್ವಪೂರ್ಣ ಸಲಹೆಗಳನ್ನು ನೀಡಿರುವ ಹಾರ್ನಳ್ಳಿ ರಾಮಸ್ವಾಮಿ ವರದಿ, ಆಡಳಿತ ಭಾಷೆ ಅನುಷ್ಠಾನದ ಬಗ್ಗೆ ಚಕಾರ ಎತ್ತದಿರುವುದು ಆಶ್ಚರ್ಯ ಎಂದು ನುಡಿದರು.
ಕನ್ನಡ ಮಾಧ್ಯಮದ ವಿದ್ಯಾರ್ಥಿಗಳನ್ನು ಹುಡುಕಿ ಪ್ರೋತ್ಸಾಹಿಸಿದ ಸಂಸ್ಥೆಗಳನ್ನು ಯೋಜನೆಯ ಫಲಾನುಭವಿ ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲೇ ಅಭಿನಂದಿಸಿದ ವಿಪರ್ಯಾಸವೂ ಸಮಾರಂಭದಲ್ಲಿ ನಡೆಯಿತು. ಹಿರಿಯ ಶಿಕ್ಷಣ ತಜ್ಞ ಎಚ್ಚೆನ್ ಮಧ್ಯೆ ಪ್ರವೇಶಿಸಿ ಈ ಹುಚ್ಚುಚ್ಚಾರಕ್ಕೆ ತಡೆ ಹಾಕಿದರು.
ಅಂದಿನ ಸಮಾರಂಭದಲ್ಲಿ ಒಟ್ಟು 25 ವಿದ್ಯಾರ್ಥಿಗಳಿಗೆ ಸುಮಾರು ಒಂದೂವರೆ ಲಕ್ಷ ರುಪಾಯಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications