ಇಸ್ಲಮಾಬಾದ್ನಿಂದ ಅಹಮದಾಬಾದ್ಗೆ ಬಂದ ನೆರವು
ಅಹಮದಾಬಾದ್ : ಗುಜರಾತಿನ ಭೂಕಂಪ ಗ್ರಸ್ತರಿಗೆ ಇಸ್ಲಮಾಬಾದಿನಿಂದ ನೆರವು ಹರಿವಿನ ಪ್ರಕ್ರಿಯೆ ಆರಂಭವಾಗಿದ್ದು, ಪಾಕಿಸ್ತಾನದ ನೆರವಿನ ಪರಿಹಾರ ಸಾಮಗ್ರಿಗಳನ್ನು ಹೊತ್ತ ಸಿ- 130 ವಿಮಾನ ಮಂಗಳವಾರ ಮಧ್ಯಾಹ್ನ ಇಲ್ಲಿನ ಸರ್ದಾರ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.
ಇನ್ನೆರಡು ದಿನಗಳಲ್ಲಿ ಮತ್ತೆರಡು ಪರಿಹಾರ ಸಾಮಗ್ರಿಗಳನ್ನು ಹೊತ್ತ ವಿಮಾನಗಳು ಗುಜರಾತ್ ನೆರವಿಗೆ ಬರಲಿವೆ ಎಂದು ಪಾಕಿಸ್ತಾನಿ ತುರ್ತು ಪರಿಹಾರ ಘಟಕದ ಮಹಾ ನಿರ್ದೇಶಕ ಇಲಿಯಾಸ್ ಹುಸೇನ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಗುಜರಾತ್ಗೆ ಆಗಮಿಸಿರುವ ಸಹಾಯಾರ್ಥ ತಂಡದ ನೇತೃತ್ವವನ್ನು ಅವರು ವಹಿಸಿದ್ದಾರೆ. ಭಾರತದೊಂದಿಗೆ ನಾವು ಸೌಹಾರ್ದ ಸಂಬಂಧವನ್ನು ಹೊಂದಲು ಬಯಸುತ್ತೇವೆ ಎಂದು ಇಲಿಯಾಸ್ ಹೇಳಿದರು.
200 ಟೆಂಟ್ಗಳು, 2500 ಬ್ಲಾಂಕೆಟ್ಗಳು ಮಂಗಳವಾರ ಇಸ್ಲಮಾಬಾದ್ನಿಂದ ಅಹಮದಾಬಾದ್ಗೆ ಬಂದ ನೆರವಿನಲ್ಲಿ ಸೇರಿವೆ. ಜನವರಿ 26 ರಂದು ಪಾಕಿಸ್ತಾನದಲ್ಲಿ ಸಂಭವಿಸಿದ್ದು ಸಣ್ಣ ಪ್ರಮಾಣದ ಭೂಕಂಪ ಎಂದು ಇಲಿಯಾಸ್ ತಿಳಿಸಿದರು.
(ಯಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications