ಗುಡುಗಿನ ಶಬ್ದವೂ ಭೂಕಂಪ ಎನಿಸೀತು
ಬೆಂಗಳೂರು : ಭುಜ್‌ನಲ್ಲಿ ಭೂತಾಯಿ ಮತ್ತೆ ಮತ್ತೆ ನಡುಗುತ್ತಲೇ ಇದ್ದಾಳೆ. ಬೆಂಗಳೂರೂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಸುಂಧರೆ ಸೋಮವಾರ ತಾನೂ ನಡುಗಿ, ಜನರನ್ನೂ ನಡುಗಿಸಿದಳು. ಕನಕಪುರ ಸಮೀಪದ ಹಾರೋಹಳ್ಳಿಯಲ್ಲಿ 200ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟವು. ಗುಜರಾತ್ ಭೂಕಂಪದ ಹಾನಿಯನ್ನು ಟಿ.ವಿಯಲ್ಲಿ ಕಂಡ ಜನರಿಗೆ ತಮ್ಮ ನೆಲವೇ ನಡುಗಿದಾಗ ಭೂಮಿಯೇ ಬಾಯ್ತೆರೆದಂತೆ ಅನ್ನಿಸಿತ್ತು.
ಆಕಾಶದಲ್ಲಿ ಗುಡುಗಿನ ಶಬ್ದ ಕೇಳಿದರೂ ಜನ ಹೆದರುವ ಸ್ಥಿತಿ. ಸಧ್ಯ ಈಗ ಮಳೆಗಾಲ ಅಲ್ಲ ಎಂಬುದು ಸಮಾಧಾನಕರ ಅಂಶ. ಅಂದಹಾಗೆ ರಾಜ್ಯದಲ್ಲಿ ಎಂದಿನಂತೆ ಒಣಹವೆ ಮುಂದುವರಿದಿದೆ. ರಾಜ್ಯದ ಅತಿ ಕನಿಷ್ಠ ಉಷ್ಣಾಂಶ 11.1ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಅನೇಕ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಬದಲಾವಣೆ ಕಂಡುಬಂದಿದೆ.
ಕೆಲವೆಡೆ ಕನಿಷ್ಠ ತಾಪಮಾನ ಅಧಿಕಗೊಂಡಿದ್ದರೆ, ಮತ್ತೆ ಕೆಲವಡೆ ಸಾಮಾನ್ಯ ಮಟ್ಟಕ್ಕಿಂತಲೂ ಕಡಿಮೆ ಆಗಿತ್ತು. ದಕ್ಷಿಣ ಕರಾವಳಿಯಲ್ಲಿ ಹೆಚ್ಚಿನ ಬದಲಾವಣೆಗಳೇನೂ ಆಗಿಲ್ಲ. ಮುಂದಿನ 24 ಗಂಟೆಗಳ ಅವಧಿಯಲ್ಲೂ ರಾಜ್ಯದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳೇನೂ ಕಂಡುಬರುವುದಿಲ್ಲ.
ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಬೆಂಗಳೂರಿನಲ್ಲಿರುವ ಹವಾಮಾನ ವೀಕ್ಷಣಾಲಯದ ವರದಿ ತಿಳಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications