ಭೂಕಂಪದ ಹಾನಿ : ಹೆಚ್ಚು ತೆರಿಗೆ ಕಟ್ಟಲು ಸಿದ್ಧರಾಗಿ ಎಂದು ಪ್ರಧಾನಿ
ಲಖನೌ : ಮನುಕುಲದ ಮನವನ್ನೇ ಕಲಕಿದ ಘನಘೋರ ಭೂಕಂಪ ಉಂಟು ಮಾಡಿರುವ ವಿಪರೀತ ಹಾನಿಯ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಕೇಂದ್ರ ಸರಕಾರ ಮಂಡಿಸಲಿರುವ ಬಜೆಟ್ ಅಪ್ರಿಯವಾಗಿರುವ ಸ್ಪಷ್ಟ ಸೂಚನೆಯನ್ನು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೀಡಿದ್ದಾರೆ.
ಬರುವ ಆಯವ್ಯಯದಲ್ಲಿ ಹೆಚ್ಚು ತೆರಿಗೆ ಕಟ್ಟಲು ಸಿದ್ಧರಾಗಿರಿ ಎಂದೂ ಅವರು ರಾಷ್ಟ್ರದ ಜನತೆಗೆ ತಿಳಿಸಿದ್ದಾರೆ. ಭೂಕಂಪ, ಚಂಡಮಾರುತವೇ ಮೊದಲಾದ ಪ್ರಕೃತಿ ವಿಕೋಪಗಳು ರಾಷ್ಟ್ರಕ್ಕೆ ಅಪಾರ ಹಾನಿ ಉಂಟು ಮಾಡಿವೆ. ಪ್ರಕೃತಿ ವಿಕೋಪಗಳೇ ರಾಷ್ಟ್ರದ ಪ್ರಗತಿಗೆ ಅಡ್ಡಿ ಆಗಬಾರದು ಎಂಬ ಸತ್ಯವನ್ನು ಅರಿತು ಹೆಚ್ಚುವರಿ ತೆರಿಗೆ ವಿಧಿಸಲು ಅನುಮತಿ ನೀಡುವುದು ಅನಿವಾರ್ಯವಾದರೂ ಆಗಬಹುದು ಎಂದು ಅವರು ಹೇಳಿದ್ದಾರೆ.
ವೈಯಕ್ತಿಕ ಅಭಿಪ್ರಾಯ : ಗುಜರಾತ್ ಭೂಕಂಪದಲ್ಲಿ ಸತ್ತವರ ಸಂಖ್ಯೆ ಒಂದು ಲಕ್ಷದ ಗಡಿ ತಲುಪಬಹುದು ಎಂದು ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಅವರು, ಇದು ಜಾರ್ಜ್ ಅವರ ವೈಯಕ್ತಿಕ ಅಂದಾಜಿನ ಹೇಳಿಕೆ ಎಂದರು.
3ರಂದು ಸರ್ವಪಕ್ಷ ಸಭೆ : ಪ್ರಧಾನಿ ವಾಜಪೇಯಿ ಅವರು ಮಂಗಳವಾರ ತಮ್ಮ ಸಂಪುಟದ ಹಿರಿಯ ಸಹೋದ್ಯೋಗಿಗಳೊಂದಿಗೆ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಗುಜರಾತ್‌ನಲ್ಲಿ ಕೈಗೊಳ್ಳಲಾಗಿರುವ ಪರಿಹಾರ ಕಾರ್ಯಗಳ ಕುರಿತಂತೆ ಚರ್ಚಿಸಲು ಪ್ರಧಾನಿ ಅವರು ಫೆ.3ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications