ಹೇಳಿಕೆಯ ಮೂಲಕ ಭೂಕಂಪ ಸೃಷ್ಟಿಸಿದ್ದ ಸಚಿವ ಜಾನ್ ರಾಜೀನಾಮೆ
ಬೆಂಗಳೂರು : ಗುಜರಾತ್ನ ಭೂಕಂಪಕ್ಕೂ ಕ್ರೆೃಸ್ತರ ಮೇಲಿನ ಹಲ್ಲೆಗೂ ಸಂಬಂಧ ಕಲ್ಪಿಸಿ ವಿವಾದ ಸೃಷ್ಟಿಸಿದ್ದ ನಾಗರಿಕ ವಿಮಾನಯಾನ ಸಚಿವ ಟಿ. ಜಾನ್ ತಮ್ಮ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಬೆಳಿಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಜಾನ್, ಮುಖ್ಯಮಂತ್ರಿಗಳೊಂದಿಗೆ ದೀರ್ಘಕಾಲದ ಚರ್ಚೆಯ ನಂತರ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದರು.
ಜಾನ್ ಅವರ ಹೇಳಿಕೆಯನ್ನು ವಿರೋಧಿಸಿ ವಿವಿಧ ವಲಯಗಳಿಂದ ಎದುರಾದ ಭಾರೀ ಪ್ರತಿರೋಧದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಗುಜರಾತ್ನಲ್ಲಿ ನಡೆದ ಭೂಕಂಪವನ್ನು ಕ್ರಿಶ್ಚಿಯನ್ನರ ಮೇಲಿನ ಹಲ್ಲೆಗಳಿಗೆ ದೇವರು ನೀಡಿದ ಶಿಕ್ಷೆ ಎಂದು ಜಾನ್ ಮಂಗಳವಾರ ಬಣ್ಣಿಸಿದ್ದರು.
ಇದಕ್ಕೂ ಮುನ್ನ ಭಾರತೀಯ ಜನತಾಪಕ್ಷದ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿವಿಧ ಸಂಘಟನೆಗಳ ನೇತಾರರು, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಅಮಾನವೀಯ ಹೇಳಿಕೆ ನೀಡುವ ಮೂಲಕ ವಿಶ್ವವನ್ನು ದಂಗು ಬಡಿಸಿದ ಜಾನ್ರನ್ನು ಸಂಪುಟದಿಂದ ಕೈ ಬಿಡುವಂತೆ ಕೃಷ್ಣ ಅವರನ್ನು ಒತ್ತಾಯಿಸಿದ್ದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications