ಗುಜರಾತ್ ಪಟ್ಟಣ ದತ್ತು ಪಡೆಯಲು ರಾಜ್ಯದ ನಿರ್ಧಾರ
ಬೆಂಗಳೂರು : ಭೀಕರ ಭೂಕಂಪದಿಂದ ಬಹುತೇಕ ನೆಲಸಮವಾಗಿ ಹೋಗಿರುವ ಗುಜರಾತ್ನ ಪಾಟನ್ ಪಟ್ಟಣವನ್ನು ದತ್ತು ಪಡೆದು, ಪುನರ್ವಸತಿ ಕಲ್ಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ಥೆರೇಸಾ ಭಟ್ಟಾಚಾರ್ಯ ಅವರು ಪ್ರಕಟಿಸಿದ್ದಾರೆಂದು ಕರ್ನಾಟಕ ಸಚಿವಾಲಯದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಭುಜ್, ಕಛ್ ಹಾಗೂ ಅಂಜಾರ್ಗಳಂತೆಯೇ ಪಾಟನ್ ಪಟ್ಟಣ ಕೂಡ ಸಂಪೂರ್ಣ ನಾಶವಾಗಿ ಹೋಗಿದೆ. ಶೇಕಡಾ 90ಕ್ಕೂ ಹೆಚ್ಚು ಮನೆಗಳು ನೆಲಕಚ್ಚಿವೆ. ಈ ಪಟ್ಟಣವನ್ನು ದತ್ತು ಸ್ವೀಕರಿಸಿ ಪುನರ್ವಸತಿ ಕಲ್ಪಿಸಲು ಕರ್ನಾಟಕ ರಾಜ್ಯ ಸರಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಯಾವ ರೀತಿ ಪುನರ್ವಸತಿ ಕೈಗೊಳ್ಳಬೇಕೆಂಬುದನ್ನು ನಿರ್ಧರಿಸಲಿದ್ದಾರೆ.
ರಾಜ್ಯ ಸರಕಾರ ಗುಜರಾತ್ ಭೂಕಂಪಕ್ಕೆ ಪರಿಹಾರ ಘೋಷಿಸಿದೆ. ಒಂದು ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ನೆರವಿನ ಸಮರ್ಪಕ ಬಳಕೆ ಆಗಬೇಕು ಎಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಒರಿಸ್ಸಾಕ್ಕೂ ನೆರವು : ಚಂಡಮಾರುತದಿಂದ ತತ್ತರಿಸಿದ್ದ ಒರಿಸ್ಸಾ ರಾಜ್ಯದಲ್ಲಿ ಕೂಡ ಚಂಡಮಾರುತ ರಕ್ಷಣಾ ಕೊಠಡಿಗಳೂ ಸೇರಿದಂತೆ ನೂರು ಶಾಲೆಗಳನ್ನು ಕಟ್ಟಲು ರಾಜ್ಯ ಸರಕಾರ ನೆರವು ನೀಡುತ್ತಿದೆ ಎಂದೂ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications