ಮಾರ್ಚ್‌ನಿಂದ ಮುಕ್ತ ವಿವಿಯಲ್ಲಿ ಮಾಹಿತಿ ವಿಜ್ಞಾನ ಕೋರ್ಸುಗಳು
ಮೈಸೂರು : ಬರುವ ಮಾರ್ಚ್‌ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಮಾಹಿತಿ ವಿಜ್ಞಾನ ವಿಷಯಗಳ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸುಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಶುರುಮಾಡಲಿದೆ.
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಎಸ್.ರಾಮೇಗೌಡ ಬುಧವಾರ ಮಾಧ್ಯಮದ ವರದಿಗಾರರಿಗೆ ಈ ವಿಷಯ ತಿಳಿಸಿದರು. ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದ ಮಾದರಿಯಲ್ಲೇ ಈ ಕೋರ್ಸುಗಳ ಸ್ವರೂಪ ಇರುತ್ತದೆ. ನಗರದ ಪ್ರಸಿದ್ಧ ಎಂಜಿನಿಯರಿಂಗ್ ಕಾಲೇಜುಗಳ ಬೋಧಕರು ಪಠ್ಯಕ್ರಮ ಸಿದ್ಧಪಡಿಸುವರು. ತರಗತಿಗೆ ಹಾಜರಾಗದೆ ಮಾಹಿತಿ ವಿಜ್ಞಾನಗಳ ಬಗ್ಗೆ ಅಧ್ಯಯನ ಮಾಡುವ ತುಡಿತ ಇರುವ ವಿದ್ಯಾರ್ಥಿಗಳಿಗೆ ಈ ಕೋರ್ಸುಗಳು ವರದಾನಗಳಾಗಲಿವೆ ಎಂದಿದ್ದಾರೆ.
ದ್ವಿತೀಯ ಪಿಯುಸಿ ಅಥವಾ ಪ್ಲಸ್ ಟು ವಿದ್ಯಾರ್ಥಿಗಳು ಪದವಿ ಕೋರ್ಸುಗಳಿಗೆ ಅರ್ಜಿ ಗುಜರಾಯಿಸಬಹುದು. ಯಾವುದೇ ವಿಷಯದಲ್ಲಿ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಸ್ನಾತಕೋತ್ತರ ಕೋರ್ಸು ಮಾಡಲು ಅರ್ಹರು. ಪದವಿ ಹಾಗೂ ಸ್ನಾತಕೋತ್ತರ ಎರಡೂ ಕೋರ್ಸುಗಳು 3 ವರ್ಷ ಅವಧಿಯವಾಗಿದ್ದು, ಸೆಮಿಸ್ಟರ್ ಪದ್ಧತಿಯಲ್ಲಿರುತ್ತವೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಮಹಿಳೆಯರಿಗೆ ಅಧಿಕಾರ, ವ್ಯಾವಹಾರಿಕ ಕನ್ನಡ, ಜಾನಪದ, ಗ್ರಂಥಾಲಯ ವಿಜ್ಞಾನದಲ್ಲಿ ಬಿ.ಎ. ಹಾಗೂ ಬ್ರಹ್ಮಕುಮಾರಿ ಸಂಸ್ಥೆಗಳ ನೆರವಿನೊಂದಿಗೆ ಮೌಲ್ಯಾಧಾರಿತ ಶಿಕ್ಷಣ ವಿಷಯಗಳಲ್ಲಿ ಹೊಸ ಕೋರ್ಸುಗಳನ್ನೂ ವಿಶ್ವವಿದ್ಯಾಲಯ ಪ್ರಾರಂಭಿಸಲಿದೆ. ಬರುವ ವರ್ಷದಿಂದ ಆಂಧ್ರಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ 100 ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವ ಬಗೆಗೂ ವಿಶ್ವವಿದ್ಯಾಲಯ ಯೋಚಿಸುತ್ತಿದೆ.
ಮಾರ್ಚ್ 3ರಂದು ವಿವಿಯು ತನ್ನ ಮೊದಲ ಘಟಿಕೋತ್ಸವ ಆಯೋಜಿಸಿದೆ. ಒಟ್ಟು 6168 ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಮಾಣಪತ್ರ ಪಡೆಯಲಿದ್ದಾರೆ. 33 ಸಾವಿರ ವಿದ್ಯಾರ್ಥಿಗಳು ಎಲ್ಲಾ ಕೋರ್ಸುಗಳಿಗೆ ನೋಂದಾಯಿಸಿದ್ದು, ಬರುವ ಶೈಕ್ಷಣಿಕ ವರ್ಷದಲ್ಲಿ ಇನ್ನೂ 10 ಸಾವಿರ ವಿದ್ಯಾರ್ಥಿಗಳು ಕೋರ್ಸುಗಳಿಗೆ ಅರ್ಜಿ ಹಾಕುವ ನಿರೀಕ್ಷೆಯಿದೆ ಎಂದು ರಾಮೇಗೌಡ ವಿವರಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications