ರಾಷ್ಟ್ರಕವಿ ಕುವೆಂಪು ಸ್ಮಾರಕ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ
ಶಿವಮೊಗ್ಗ : ರಾಷ್ಟ್ರಕವಿ ಕುವೆಂಪು ಅವರ ಸ್ಮರಣಾರ್ಥ ನವೀಕರಿಸಲಾಗಿರುವ ಅವರ ಗೃಹ ಹಾಗೂ ಕವಿಶೈಲದ ಸ್ಮಾರಕಗಳನ್ನು ರಾಷ್ಟ್ರಕ್ಕೆ ಅರ್ಪಿಸಲು ಫೆ. 2ರಂದು ಏರ್ಪಡಿಸಲಾಗಿದ್ದ ಕಾರ್ಯಕ್ರಮ ಗುಜರಾತ್ ಭೂಕಂಪದ ಹಿನ್ನೆಲೆಯಲ್ಲಿ ಮುಂದಕ್ಕೆ ಹೋಗಿದೆ.
ನಿಗದಿತ ಕಾರ್ಯಕ್ರಮದಂತೆ ಮುಖ್ಯಮಂತ್ರಿ ಎಸ್.ಎ. ಕೃಷ್ಣ ಅವರು ಸ್ಮಾರಕವನ್ನು ಫೆ.2ರಂದು ರಾಷ್ಟ್ರಕ್ಕೆ ಅರ್ಪಿಸಬೇಕಾಗಿತ್ತು. ಈ ಸಂಬಂಧ ನಡೆಯಲಿದ್ದ ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ವೇದಿಕೆ ಸಜ್ಜಾಗಿತ್ತು.
ಗುಜರಾತ್ನಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ಸಾವಿರಾರು ಜನ ಸಾವನ್ನಪ್ಪಿರುವಾಗ ರಾಜ್ಯ ಸರಕಾರ ಅಧಿಕೃತವಾಗಿ ಸಂತೋಷ ಸಮಾರಂಭವೊಂದನ್ನು ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಈ ವಿಷಯವನ್ನು ಮಂಗಳವಾರ ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ. ಚಂದ್ರೇಗೌಡರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ನೂರು ವರ್ಷಗಳಷ್ಟು ಹಳೆಯದಾದ ಕುವೆಂಪು ಅವರ ನಿವಾಸದ ನವೀಕರಣ ಹಾಗೂ ಕವಿಶೈಲದ ಸ್ಮಾರಕ ನಿರ್ಮಾಣಕ್ಕೆ 1.20 ಕೋಟಿ ರುಪಾಯಿ ವೆಚ್ಚ ಮಾಡಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications