ಬಳ್ಳಾರಿಯಲ್ಲಿ ಸಚಿವ ಟಿ. ಜಾನ್ ಪ್ರತಿಕೃತಿ ದಹನ, ಮೆರವಣಿಗೆ
ಬಳ್ಳಾರಿ : ವಿವಾದಾತ್ಮಕ ಹೇಳಿಕೆ ನೀಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಕುಂದುಂಟು ಮಾಡಿರುವ ನಾಗರಿಕ ವಿಮಾನಯಾನ ಹಾಗೂ ಮೂಲಭೂತ ಸೌಕರ್ಯಗಳ ಸಚಿವ ಟಿ. ಜಾನ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಇಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಭಾರತೀಯ ಜನತಾಪಕ್ಷದ ಸ್ಥಳೀಯ ಮುಖಂಡ ಕರುಣಾಕರ ರೆಡ್ಡಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಗುರುವಾರ ಇಲ್ಲಿನ ದುರ್ಗಮ್ಮ ಗುಡಿಯ ಬಳಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಕೋಮು ಸಾಮರಸ್ಯ ಹಾಳು ಮಾಡುವಂಥ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವರನ್ನು ಬಂಧಿಸಬೇಕು ಎಂಬುದು ಅವರ ಒತ್ತಾಯವಾಗಿತ್ತು.
ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು ರಾಯಲ್ ಸರ್ಕಲ್ ಬಳಿ ಸಚಿವ ಜಾನ್ ಅವರ ಪ್ರತಿಕೃತಿಯನ್ನು ಸುಟ್ಟು, ಅವರ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರುಣಾಕರ್ ಅವರು, ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕೂಡ ಜಾನ್ರನ್ನು ಕೈಬಿಡುವಂತೆ ಆಗ್ರಹಿಸಿದರು.
(ಬಳ್ಳಾರಿ ಪ್ರತಿನಿಧಿಯಿಂದ)
ವಾರ್ತಾಸಂಚಯ
ಮುಖಪುಟ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications