ಗ್ಯಾಸ್ ಸಿಲಿಂಡರ್ ಸ್ಫೋಟ ಮಗು ಸಾವು, ನಾಲ್ವರಿಗೆ ಗಾಯ
ಬೆಂಗಳೂರು : ಬೆಂಗಳೂರಿನ ಎಚ್.ಎ.ಎಲ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮವಾಗಿ ಆರ್.ಸಿ.ಸಿ. ಕಟ್ಟಡವೊಂದು ಕುಸಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ನಾಲ್ವರು ಗಾಯಗೊಂಡಿದ್ದಾರೆ.
ಗುಜರಾತ್ ಭೂಕಂಪದ ಕಹಿ ಹಾಗೂ ಸೋಮವಾರದ ಭೂಕಂಪದ ಭೀತಿಯಿಂದ ಹೊರಬರಲಾಗದೇ ಮನದಲ್ಲೇ ಕುದಿಯುತ್ತಾ, ಆತಂಕ ಹಾಗೂ ಭಯದಲ್ಲಿ ಬದುಕುತ್ತಿರುವ ಜನ, ಗುರುವಾರ ಬೆಳಗ್ಗೆ ಸಂಭವಿಸಿದ ಈ ಸಿಲಿಂಡರ್ ಸ್ಫೋಟದ ನಡುಕಕ್ಕೆ ಹೆದರಿ ಮನೆಗಳಿಂದ ಹೊರಗೋಡಿ ಬಂದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಆರ್.ಸಿ.ಸಿ. ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಮನೆಯ ಒಡತಿ ಮಹೇಶ್ವರಿ ಅವರಿಗೆ ಸುಟ್ಟಗಾಯಗಳಾಗಿವೆ.
ರಾತ್ರಿಯಿಂದಲೇ ಗ್ಯಾಸ್ ಲೀಕ್ ಆಗಿದ್ದು, ಬೆಳಗ್ಗೆ ಒಲೆ ಹಚ್ಚುಲು ಬಂದಾಗ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದಿಂದ ಅಕ್ಕಪಕ್ಕದ ಮನೆಗಳೂ ಜಖಂಗೊಂಡಿದ್ದು, ಭಾರಿ ಹಾನಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications