ವಿದ್ಯುತ್ ಕ್ಷೇತ್ರದಲ್ಲಿ ಕಠಿಣ ಆಯ್ಕೆ ಹಾಗೂ ದೃಢ ನಿರ್ಧಾರ - ಕೃಷ್ಣ
ಬೆಂಗಳೂರು : ರೈತರು ಸೇರಿದಂತೆ ರಾಜ್ಯದ ಎಲ್ಲಾ ವಿದ್ಯುತ್ ಬಳಕೆದಾರರಿಗೆ ಮೀಟರ್‌ಗಳನ್ನು ಕಡ್ಡಾಯವಾಗಿ ಅಳವಡಿಸಲಾಗುವುದು. ಕಠಿಣ ಆಯ್ಕೆಗಳು ಹಾಗೂ ನಿರ್ಧಾರಗಳನ್ನು ಕೈಗೊಳ್ಳುವ ಜರೂರು ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಕರ್ನಾಟಕ ಇನ್‌ಫ್ರಾಸ್ಟ್ರಕ್ಚರ್ ಟಾಸ್ಕ್‌ಫೋರ್ಸ್ ಹಾಗೂ ಭಾರತೀಯ ಕೈಗಾರಿಕೆಗಳ ಒಕ್ಕೂಟ ಗುರುವಾರ ಜಂಟಿಯಾಗಿ ಏರ್ಪಡಿಸಿದ್ದ ಕರ್ನಾಟಕದ ವಿದ್ಯುತ್ ಮತ್ತು ಇಂಧನ ನೀತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದ ಅವರು ವಿದ್ಯುತ್ ನೀತಿಯಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.
ಈ ಮುನ್ನ ಭಾರತೀಯ ಜನತಾಪಕ್ಷ ಹಾಗೂ ಕೆಲವು ರೈತಪರ ಸಂಘಟನೆಗಳು ನೀರಾವರಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿದ್ದವು. ಈ ಸಂಘಟನೆಗಳನ್ನು ಹೆಸರಿಸದೇ ಮಾತನಾಡಿದ ಮುಖ್ಯಮಂತ್ರಿ, ಮೀಟರ್ ಅಳವಡಿಸುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಕೃಷ್ಯುತ್ಪನ್ನಗಳಿಗೆ ಸೂಕ್ತ ಬೆಂಬಲ ದೊರಕುವಂತಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೃಢ ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಸತತವಾಗಿ ಪ್ರಯತ್ನಿಸುತ್ತಿವೆ. ರೈತರ ಹಿತಾಸಕ್ತಿ ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ರೈತರು ಮುಂದೆಂದೂ ಸಂಕಷ್ಟಕ್ಕೆ ಸಿಲುಕದಂತೆ ಸರ್ಕಾರ ಕ್ರಮ ಕೈಗೊಳ್ಳುವುದು. ರೈತರು ಸಂಕಷ್ಟದಲ್ಲಿರುವುದರಿಂದ ಪ್ರಸ್ತುತ ಒದಗಿಸುತ್ತಿರುವ 142 ಕೋಟಿ ರು. ಸಬ್ಸಿಡಿಯ ವಿದ್ಯುತ್ತನ್ನು ರೈತರಿಗೆ ಮುಂದುವರಿಸಲಾಗುವುದು ಎಂದು ಕೃಷ್ಣ ಹೇಳಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications