ಕಂಡಲ್ಲಿ ಗುಂಡಿಕ್ಕುವ ಆದೇಶ ಹೊರಡಿಸಿಲ್ಲ -ಹರೇನ್ ಪಾಂಡ್ಯ
ಅಹಮದಾಬಾದ್ : ಭುಜ್ ಮತ್ತು ಕಛ್ ಪ್ರದೇಶ ಸೇರಿದಂತೆ ಭೂಕಂಪದಿಂದ ಪೀಡಿತ ಪ್ರದೇಶಗಳಲ್ಲಿ ದರೋಡೆ ಮತ್ತು ಕಳ್ಳತನಗಳಲ್ಲಿ ತೊಡಗಿರುವವರಿಗೆ ಕಂಡಲ್ಲಿ ಗುಂಡಿಕ್ಕುವಂತೆ ಸ್ಥಳೀಯ ಆಡಳಿತವಾಗಲೀ, ಕಛ್‌ನ ಮಿಲಿಟರಿ ಪಡೆಯಾಗಲಿ ಆದೇಶ ಹೊರಡಿಸಿಲ್ಲ ಎಂದು ಗುಜರಾತ್‌ನ ಗೃಹ ಮಂತ್ರಿ ಹರೇನ್ ಪಾಂಡ್ಯ ಬುಧವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪಾಂಡ್ಯ ಅವರು ಭೂಕಂಪದಲ್ಲಿ ನೆಲಕಚ್ಚಿರುವ ಕಟ್ಟಡಗಳ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡಿರುವ ಬೆಲೆ ಬಾಳುವ ವಸ್ತುಗಳನ್ನು ರಕ್ಷಿಸುವಂತೆ ಪರಿಹಾರ ಕಾರ್ಯದಲ್ಲಿ ತೊಡಗಿರುವವರಿಗೆ ಸೂಚನೆ ಕೊಡಲಾಗಿತ್ತು ಎಂದರು. ಅಲ್ಲದೆ ಸಂಪೂರ್ಣವಾಗಿ ನಾಶವಾಗಿರುವ ಊರುಗಳಲ್ಲಿನ ಪರಿಸ್ಥಿತಿಯನ್ನು ಯಾರೂ ದುರುಪಯೋಗ ಪಡಿಸಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ನಾಗರಿಕರಿಗೆ ತಿಳಿಸಲಾಗಿತ್ತು . ದರೋಡೆಕೋರರು ಹಾಗೂ ಕಳ್ಳರನ್ನು ತೀವ್ರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶಿಸಲಾಗಿತ್ತೇ ಹೊರತು ಕಂಡಲ್ಲಿ ಗುಂಡಿಕ್ಕುವ ಆದೇಶ ಹೊರಡಿಸಿಲ್ಲ ಎಂದು ಹರೇನ್ ಪಾಂಡ್ಯ ಸ್ಪಷ್ಟಪಡಿಸಿದರು.
ಕುಸಿದು ಹೋಗಿರುವ ಕಟ್ಟಡಗಳಡಿಯಿಂದ ಅಳಿದುಳಿದ ವಸ್ತುಗಳನ್ನು ತೆಗೆಯುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಪರಿಹಾರ ಕಾರ್ಯಗಳಲ್ಲಿ ತೊಡಗಿರುವವರು ನಿರ್ವಸಿತರಿಗೆ ಆಹಾರ, ಬಟ್ಟೆ ಪೂರೈಕೆ ಹಾಗೂ ಶುಶ್ರೂಷೆ ಮಾಡುವ ಕೆಲಸದಲ್ಲಿ ನಿರತರಾಗಿರುವುದರಿಂದ ಕಳ್ಳತನದ ಸಂಭವವೂ ಇಲ್ಲದಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ನೀಡಲಾಗಿತ್ತೇ ಹೊರತು ಕಂಡಲ್ಲಿ ಗುಂಡು ಹಾರಿಸುವಂತೆ ಆದೇಶಿಸಿಲ್ಲ ಎಂದ ಸಚಿವರು ಸಾಕಷ್ಟು ಪೊಲೀಸ್ ಮತ್ತು ಮಿಲಿಟರಿ ಪಡೆಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications