ಸಿ.ಇ.ಟಿ. ಅರ್ಜಿಗೆ ಲಕ್ಷ ವಿದ್ಯಾರ್ಥಿಗಳಿಂದ ಕೋರಿಕೆ : ಸಚಿವ
ಬೆಂಗಳೂರು : ಮೇ ತಿಂಗಳಿನಲ್ಲಿ ನಡೆಯಲಿರುವ ಸಿ.ಇ.ಟಿ. ಪರೀಕ್ಷೆಯಲ್ಲಿ ಪಾಲ್ಗೊಂಡು ರಾಜ್ಯದ ವೃತ್ತಿ ಪರ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಬಯಸಿ ಸುಮಾರು ಒಂದು ಲಕ್ಷ ಅಭ್ಯರ್ಥಿಗಳು ಅರ್ಜಿಗಳಿಗೆ ಕೋರಿಕೆ ಸಲ್ಲಿಸಿದ್ದಾರೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಶನಿವಾರ ತಿಳಿಸಿದ್ದಾರೆ.
ಸಿ.ಇ.ಟಿ. ಪರೀಕ್ಷೆಗೆ ಕುಳಿತುಕೊಳ್ಳಲು ರಾಜ್ಯದ ಸುಮಾರು 35 ಸಾವಿರ ವಿದ್ಯಾರ್ಥಿಗಳು ಹಾಗೂ ರಾಜ್ಯದ ಹೊರಗಿನಿಂದ ಸುಮಾರು 55 ಸಾವಿರ ವಿದ್ಯಾರ್ಥಿಗಳು ಕೈಪಿಡಿ ಕೋರಿ ಹಣ ಸಂದಾಯ ಮಾಡಿದ್ದಾರೆ ಎಂದೂ ಅವರು ತಿಳಿಸಿದರು.
ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಒಳ ಮೀಸಲಾತಿ ಮೂಲಕ ಸೀಟು ಒದಗಿಸಲೂ ಈ ಬಾರಿ ತೀರ್ಮಾನಿಸಲಾಗಿದೆ. ಹೊಸ 41 ಕಾಲೇಜುಗಳಿಗೆ ಪ್ರವೇಶ ನೀಡುವ ಅವಕಾಶ ದೊರೆತಲ್ಲಿ 10 ಸಾವಿರ ಹೆಚ್ಚುವರಿ ಸೀಟುಗಳು ಲಭ್ಯವಾಗುತ್ತವೆ ಎಂಬ ವಿವರವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಹರೀಶ್ ಗೌಡರು ನೀಡಿದರು.
ಈ ಬಾರಿ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸುಮಾರು 19 ಸಾವಿರ ಸೀಟುಗಳು ಲಭ್ಯವಿದೆ ಎಂದೂ ಅವರು ಹೇಳಿದರು. ವೃತ್ತಿ ಪರ ಶಿಕ್ಷಣಕ್ಕೆ ಪ್ರವೇಶ ನೀಡುವಲ್ಲಿ ರಾಜ್ಯದ ಸಿ.ಇ.ಟಿ. ಪರೀಕ್ಷಾ ವಿಧಾನ ರಾಷ್ಟ್ರಕ್ಕೇ ಮಾದರಿಯಾಗಿದ್ದು, ಪಾರದರ್ಶಕವೂ ಆಗಿದೆ ಎಂದು ಅವರು ಹೇಳಿದರು.
ಈಗಾಗಲೇ ಸಿ.ಇ.ಟಿ. ಪರೀಕ್ಷಾ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ನಿಗದಿತ ವೇಳಾಪಟ್ಟಿಯಂತೆ ಮೇ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ರಾಜ್ಯದ ಅಭ್ಯರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರ ಮೂಲಕ ಅರ್ಜಿಗೆ ಬೇಡಿಕೆ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.
ಪರೀಕ್ಷಾ ವೇಳಾಪಟ್ಟಿ : 16-05-2001 ಬುಧವಾರ ಬೆಳಗ್ಗೆ 10ರಿಂದ 11-20ರವರೆಗೆ ಗಣಿತ, ಮಧ್ಯಾಹ್ನ 2-30ರಿಂದ 3-50ರವರೆಗೆ ಜೀವಶಾಸ್ತ್ರ. 17-05-2001 ಗುರುವಾರ ಬೆಳಗ್ಗೆ 10ರಿಂದ 11-20ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2-30ರಿಂದ 3-50ರವರೆಗೆ ರಸಾಯನಶಾಸ್ತ್ರ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications