ಗುಜರಾತ್ ಭೂಕಂಪ ಸಂತ್ರಸ್ತರಿಗೆ ಹೃತಿಕ್‌ರಿಂದ10 ಲಕ್ಷ ರು. ನೆರವು
ಮುಂಬಯಿ : ಬಾಲಿವುಡ್‌ನ ಕನಸಿನ ರಾಜ ಹೃತಿಕ್ ರೋಷನ್ ಗುಜರಾತ್ ಭೂಕಂಪ ಸಂತ್ರಸ್ತರ ಪುನರ್ವಸತಿಗಾಗಿ ಹತ್ತು ಲಕ್ಷ ರುಪಾಯಿಗಳ ನೆರವು ನೀಡಿದ್ದಾರೆ. ಬಾಲಿವುಡ್ ಮಾಜಿ ತಾರೆ ಹಾಗೂ ತಮ್ಮ ತಂದೆ ರಾಕೇಶ್ ರೋಷನ್ ಅವರ ಜತೆಗೂಡಿ ಮಹಾರಾಷ್ಟ್ರದ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್‌ಮುಖ್ ಅವರನ್ನು ಭೇಟಿ ಮಾಡಿದ ಹೃತಿಕ್ ಶನಿವಾರ ಹತ್ತು ಲಕ್ಷ ರುಪಾಯಿಗಳ ಮೌಲ್ಯದ ಚೆಕ್ ಅನ್ನು ನೀಡಿದರು.
ಈ ವಿಷಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಾರ್ಯಾಲಯದ ಉನ್ನತಾಧಿಕಾರಿ ಮೂಲಗಳು ಶನಿವಾರ ಮಧ್ಯಾಹ್ನ ತಿಳಿಸಿವೆ. ಇದಕ್ಕೂ ಮುನ್ನ ದೇಶ್‌ಮುಖ್ ಅವರು ಪ್ರದರ್ಶನ ಪಂದ್ಯಗಳು, ಬಾಲಿವುಡ್ ನಟ- ನಟಿಯರ ನೆರವಿನಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಭೂಕಂಪ ಸಂತ್ರಸ್ತರ ನಿಧಿಗೆ ಹತ್ತು ಕೋಟಿ ರುಪಾಯಿಗಳನ್ನು ಸಂಗ್ರಹಿಸುವುದಾಗಿ ಘೋಷಿಸಿದ್ದರು.
ಪ್ರಧಾನಿ ವಿದೇಶ ಪ್ರವಾಸ ರದ್ದು : ಗುಜರಾತ್ ಭೂಕಂಪದ ಹಿನ್ನೆಲೆಯಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು, ನಿಗದಿತ ಒಂದು ವಾರಗಳ ಮಲೇಶಿಯಾ ಹಾಗೂ ಜಪಾನ್ ಪ್ರವಾಸ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
ಪ್ರಸಕ್ತ ಕೈರೋದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜಸ್ವಂತ್ ಸಿಂಗ್ ಅವರನ್ನು ಸಂಪರ್ಕಿಸಿ, ಮಾತುಕತೆ ನಡೆಸಿದ ತರುವಾಯ ಪ್ರಧಾನಿಯವರು ಈ ನಿರ್ಧಾರ ಕೈಗೊಂಡರು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯದ ವಕ್ತಾರರು ತಿಳಿಸಿದ್ದಾರೆ.
ಮಲೇಶಿಯಾ ಹಾಗೂ ಜಪಾನ್ ಸರಕಾರಗಳಿಗೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕೈಗೊಳ್ಳಲಾಗಿರುವ ಈ ನಿರ್ಧಾರದ ಬಗ್ಗೆ ತಿಳಿಸುವಂತೆ ಪ್ರಧಾನಿ ವಾಜಪೇಯಿ ಅವರು ವಿದೇಶಾಂಗ ಕಾರ್ಯದರ್ಶಿ ಲಲಿತ್ ಮಾನ್‌ಸಿಂಗ್ ಅವರಿಗೆ ತಿಳಿಸಿದ್ದಾರೆ ಎಂದೂ ವಕ್ತಾರರು ತಿಳಿಸಿದ್ದಾರೆ.
| ಮುಖಪುಟ |
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications