ಜಾನ್‌ರನ್ನು ಬಂಧಿಸಿದರೆ ಉಗ್ರ ಹೋರಾಟ : ಕ್ರೆೃಸ್ತರ ಎಚ್ಚರಿಕೆ
ಬೆಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿ ರಾಜೀನಾಮೆ ಕೊಟ್ಟ ಸಚಿವ ಜಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿರುವ ಬಗ್ಗೆ ಕ್ರಿಶ್ಚಿಯನ್ ಸಮುದಾಯ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದೆ. ಜಾನ್ ಅವರನ್ನು ಬಂಧಿಸಿದರೆ, ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಭಾರತೀಯ ಕ್ರೆೃಸ್ತರ ಜಾಗತಿಕ ಸಮಿತಿ ನೀಡಿದೆ.
ಭಾರತೀಯ ದಂಡ ಸಂಹಿತೆ 153 ಎ ಕಾಯ್ಡೆ ಪ್ರಕಾರ ಜಾನ್ ಅವರನ್ನು ಬಂಧಿಸಬೇಕು ಎಂದು ಹೇಳಲು ಬಿ.ಜೆ.ಪಿ.ಗೆ ಯಾವುದೇ ನೈತಿಕ ಹಕ್ಕಿಲ್ಲ. ಹಾಗೇ ಬಂಧಿಸಲೇ ಬೇಕು ಎನ್ನುವುದಾದರೆ, ಮೊದಲು ಕೋಮು ಪ್ರಚೋದನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಎಲ್.ಕೆ. ಆಡ್ವಾಣಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಬಂಧಿಸಬೇಕು ಎಂದು ಸಮಿತಿಯ ರಾಷ್ಟ್ರೀಯ ಸಂಚಾಲಕ ಸಾಜನ್ ಕೆ. ಜಾರ್ಜ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಸಚಿವ ಜಾನ್ ಅವರು ಯಾವುದೇ ನಿರ್ದಿಷ್ಟ ಜಾತಿ ಅಥವಾ ಕೋಮಿನ ವಿರುದ್ಧ ಹೇಳಿಕೆ ನೀಡಿಲ್ಲ. ಮಿಗಿಲಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ಕೊಟ್ಟಿದ್ದಾರೆ. ವಸ್ತು ಸ್ಥಿತಿ ಹೀಗಿರುವಾಗ ಅವರನ್ನು ಬಂಧಿಸಲೇಬೇಕು ಎಂದು ಪಟ್ಟು ಹಿಡಿಯುವುದು ನ್ಯಾಯಸಮ್ಮತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜಾನ್ ನಿವಾಸದಲ್ಲಿ ಸಭೆ : ಇದನ್ನು ಒಂದು ರಾಜಕೀಯ ಪಿತೂರಿ ಎಂದೂ ಬಣ್ಣಿಸಿರುವ ಕ್ರಿಶ್ಚಿಯನ್ ಮುಖಂಡರು ಶುಕ್ರವಾರ ಜಾನ್ ಅವರ ನಿವಾಸದಲ್ಲಿ ಸಭೆ ಸೇರಿ ಚರ್ಚಿಸಿದರು. ಈ ಸಭೆಯಲ್ಲಿ ಮುಖ್ಯಮಂತ್ರಿ ಕೃಷ್ಣ ಅವರ ವಿರುದ್ಧವೂ ಅಭಿಪ್ರಾಯಗಳು ಮೂಡಿದವು ಎಂದು ಗೊತ್ತಾಗಿದೆ.
ಜಾನ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಇಂದಿರಾನಗರದಲ್ಲಿರುವ ಜಾನ್ ಅವರ ಮನೆಗೆ ಭೇಟಿ ನೀಡಿ ಜಾನ್ ಹಾಗೂ ಕ್ರೆೃಸ್ತ ಮುಖಂಡರೊಂದಿಗೆ 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications