ಸ್ವಾತಂತ್ರ್ಯ ಹೋರಾಟಗಾರರ ಮಾಸಿಕ ಪಿಂಚಣಿಯಲ್ಲಿ ಹೆಚ್ಚಳ
ಹಾಸನ : ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುತ್ತಿದ್ದ ಮಾಸಿಕ ಪಿಂಚಣಿಯನ್ನು ಕಳೆದ ಸಾಲಿನ ಸೆಪ್ಟೆಂಬರ್ನಿಂದ 1000 ರೂಪಾಯಿಗೆ ಏರಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಅಭಿವೃದ್ಧಿ ವಿಭಾಗ ಕಾರ್ಯದರ್ಶಿ ಸಿ. ಎಂ. ಹೂಗಾರ್ ಈ ವಿಷಯವನ್ನು ಪ್ರಕಟಿಸಿದ್ದಾರೆ. ಈವರೆಗೆ ಮಾಸಿಕ ಪಿಂಚಣಿ ರೂಪದಲ್ಲಿ, 750 ರೂಪಾಯಿ ನೀಡಲಾಗುತ್ತಿದ್ದು, ಅದನ್ನು 1000 ರೂಪಾಯಿಗೆ ಏರಿಸಲಾಗಿದೆ. ಹಾಸನದ ಎಂಪಿ ಪುಟ್ಟ ಸ್ವಾಮಿ ಗೌಡ ಅವರು ಪಿಂಚಣಿ ಏರಿಕೆಗೆ ಒತ್ತಾಯಿಸಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಇತರ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಸರಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೂಗಾರ್ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ಪ್ರವೇಶ ಸಂದರ್ಭದಲ್ಲಿ ಮೀಸಲಾತಿ ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವಂತೆ ಪುಟ್ಟ ಸ್ವಾಮಿ ಗೌಡ ಅವರು ಸರಕಾರವನ್ನು ಒತ್ತಾಯಿಸಿದ್ದರು.
ಪ್ರಸ್ತುತ ಸ್ವಾತಂತ್ರ್ಯ ಹೋರಾಟಗಾರರು ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಅವರ ಮಕ್ಕಳಿಗೆ, ಎರಡು ಮೆಡಿಕಲ್ ಮತ್ತು ಐದು ಇಂಜಿನಿಯರಿಂಗ್ ಸೀಟುಗಳನ್ನು ಕಾಯ್ದಿರಿಸಲಾಗುವುದು. 1998, ಜುಲೈ ನಾಲ್ಕರ ಆದೇಶದಂತೆ, ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಅವರನ್ನು ಅವಲಂಬಿಸಿರುವ ಕುಟುಂಬದವರಿಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಲಾಗುವುದು ಎಂದು ಹೂಗಾರ್ ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications