ಮಠ, ದೇವಾಲಯ ಕಪ್ಪು ಹಣದ ಕೇಂದ್ರಗಳು : ನಿಡುಮಾಮಿಡಿ ಶ್ರೀ
ರಾಯಚೂರು : ಮನುಷ್ಯನನ್ನು ನೀತಿವಂತನನ್ನಾಗಿ ರೂಪಿಸಬೇಕಿದ್ದ ಧಾರ್ಮಿಕ ಸಂಸ್ಥೆಗಳು ದಾರಿ ತಪ್ಪಿಸುವ ವೇದಿಕೆಯಾಗಿವೆ ಎಂದು ಮಾನವ ಧರ್ಮ ಪೀಠದ ನಿಡುಮಾಮಿಡಿ ಮಹಾ ಸಂಸ್ಥಾನ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.
ಅವರು ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ದಶಕದ ನೆನಪು ಎಂಬ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಧಾರ್ಮಿಕ ಕೇಂದ್ರಗಳು ಮೋಸ ವಂಚನೆಗಳಿಗೆ ರಹದಾರಿ ನೀಡಿ ಹೊಸ ಮಾರ್ಗಗಳ ಮೂಲಕ ಭಕ್ತರನ್ನು ವಂಚಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಠ , ದೇವಸ್ಥಾನಗಳೇ ಕಪ್ಪು ಹಣ ಸಂಗ್ರಹಿಸುವ ಕೇಂದ್ರಗಳಾಗಿ ಪರಿವರ್ತಿತವಾಗಿವೆ. ಸಾಮಾಜಿಕ ವ್ಯವಸ್ಥೆ ಹದಗೆಟ್ಟು ಮಾನವೀಯ ಮೌಲ್ಯದ ಅಧೋಗತಿಗಳಿಯುತ್ತಿದೆ ಎಂದ ಅವರು ಜಗತ್ತಿನ ಇತಿಹಾಸದಲ್ಲಿ ರೈತರು ಕೈ ಸುಟ್ಟುಕೊಂಡು, ಸೋತು ಆತ್ಮಹತ್ಯೆ ಮಾಡಿಕೊಂಡಿರುವುದು ಇದೇ ಮೊದಲು. ಇದು ಜಾಗತೀಕರಣದಿಂದ ದುಷ್ಪರಿಣಾಮಗಳನ್ನು ಬಿಂಬಿಸುತ್ತಿದೆ ಎಂದು ಅವರು ಎಚ್ಚರಿಕೆ ನೀಡಿದರು.
ಸಮಾರಂಭದಲ್ಲಿ ಸ್ವಾಮೀಜಿಗಳು, ಎನ್.ಬಿ. ಲಕ್ಷ್ಮೀ ರೆಡ್ಡಿ ಅವರ ಆತ್ಮಲಿಂಗೇಶ್ವರ ವಚನಗಳು ಮತ್ತು ರಾಘವೇಂದ್ರ ದಂಡಿನ ಅವರ ನಕ್ಷತ್ರಗಳು ಕೃತಿಯನ್ನು ಬಿಡುಗಡೆ ಮಾಡಿದರು. ದೇವೇಂದ್ರ ಕುಮಾರ ಹಕಾರಿ ಕಾರ್ಯಕ್ರಮ ಉದ್ಘಾಟಿಸಿದರು. ಗುಲ್ಬರ್ಗ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಡಾ. ಚೆನ್ನಣ್ಣ ವಾಲೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications