ಮಂಗಳೂರಿನಲ್ಲಿ ರಾಜ್ಯ ಸರಕಾರಿ ವೈದ್ಯರ ಸ್ನೇಹ ಮಿಲನ
ಮಂಗಳೂರು : ಮಂಗಳೂರಿನಲ್ಲಿ ಇನ್ನೊಂದು ರಾಜ್ಯ ಮಟ್ಟದ ಸಮಾವೇಶ. ಈ ಬಾರಿ ರಾಜ್ಯ ಸರಕಾರಿ ವೈದ್ಯರ ಸರದಿ. ಫೆಬ್ರವರಿ 10 ಮತ್ತು 11ರಂದು ರಾಜ್ಯ ಸರಕಾರಿ ವೈದ್ಯರ ಸ್ನೇಹ ಮಿಲನ ಮತ್ತು ವೈದ್ಯರ ಸಂಘದ ಬೆಳ್ಳಿ ಹಬ್ಬ ಮಂಗಳೂರಿನ ಟೌನ್ ಹಾಲ್‌ನಲ್ಲಿ ನಡೆಯಲಿದೆ.
ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸರಕಾರಿ ಆಸ್ಪತ್ರೆಗಳಿಂದ ಸುಮಾರು 1,500 ಮಂದಿ ವೈದ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹನ್ನೊಂದು ಮಂದಿ ವೈದ್ಯರಿಗೆ ವೈದ್ಯಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ , ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಎ.ಪಿ. ಮೂರ್ತಿ ಸೋಮವಾರದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯದ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯದೆ ಇರುವುದರಿಂದ ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ. ಆದ್ದರಿಂದ ಖಾಲಿ ಹುದ್ದೆಗಳಿಗೆ ನೇಮಕಾತಿ ಮತ್ತು ವೈದ್ಯರ ಕಾಲ ಮಿತಿ ಬಡ್ತಿಯ ವಿಚಾರಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಮೂರ್ತಿ ಹೇಳಿದರು.
ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಎ.ಬಿ. ಮಾಲಕರೆಡ್ಡಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಗಮ ಎಂಬ ಸ್ಮರಣ ಸಂಚಿಕೆಯನ್ನು ಕೇಂದ್ರ ಜವಳಿ ಸಚಿವ ವಿ. ಧನಂಜಯ ಕುಮಾರ್ ಬಿಡುಗಡೆ ಮಾಡುವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮೋಟಮ್ಮ ಸಂಘದ ಸ್ಮರಣಿಕೆ ಮತ್ತು ಬೆಳ್ಳಿ ಹಬ್ಬದ ಲಾಂಛನವನ್ನು ಬಿಡುಗಡೆ ಮಾಡುವರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications