ಬಳ್ಳಾರಿ ದುರ್ಗದ ವೀಕ್ಷಣೆಗೆ ಶುಲ್ಕ : ನಾಗರಿಕರ ಪ್ರತಿಭಟನೆ
ಬಳ್ಳಾರಿ : ರಾಜ್ಯದ ಪ್ರಮುಖ 52 ಕೋಟೆಗಳಲ್ಲಿ ಒಂದಾದ ಬಳ್ಳಾರಿ ದುರ್ಗ ಹಾಗೂ ಬೆಟ್ಟದ ವೀಕ್ಷಣೆಗೆ ಪ್ರಾಚ್ಯವಸ್ತು ಇಲಾಖೆ 5 ರುಪಾಯಿ ಪ್ರವೇಶ ಶುಲ್ಕ ವಿಧಿಸಿದೆ. ಕೋಟೆ ಹಾಗೂ ಬೆಟ್ಟ ನೋಡಲು ಬರುವವರು ಈಗ ಕಡ್ಡಾಯವಾಗಿ 5 ರು. ಪ್ರವೇಶ ಶುಲ್ಕ ತೆರಲೇ ಬೇಕು.
ಇಲಾಖೆಯ ಈ ನಿರ್ಧಾರವನ್ನು ಸ್ಥಳೀಯ ನಾಗರಿಕರು ಹಾಗೂ ಪ್ರವಾಸಿಗರು ತೀವ್ರವಾಗಿ ಖಂಡಿಸಿದ್ದಾರೆ. ಈ ಕೋಟೆಯ ಪ್ರದೇಶದಲ್ಲಿ ಉತ್ತಮ ಸೌಲಭ್ಯಗಳ ಮಾತಿರಲಿ ಕನಿಷ್ಠ ಸೌಲಭ್ಯಗಳೂ ಇಲ್ಲ. ಕುಡಿಯುವ ನೀರಿಗೂ ಇಲ್ಲಿ ತೊಂದರೆ, ಇತಿಹಾಸ ವರ್ಣಿಸಲು ಸರಿಯಾದ ಗೈಡ್ ಕೂಡ ಇಲ್ಲ. ಪರಿಸ್ಥಿತಿ ಹೀಗಿರುವಾಗ ಪ್ರವೇಶ ಶುಲ್ಕ ವಿಧಿಸುವುದು ಯಾವ ನ್ಯಾಯ ಎಂಬುದು ಸ್ಥಳೀಯರ ಪ್ರಶ್ನೆ.
ಪ್ರಾಚ್ಯವಸ್ತು ಇಲಾಖೆಯ ನಿರ್ದೇಶನದ ಮೇರೆಗೆ ನಾವು ಶುಲ್ಕ ವಿಧಿಸಿದ್ದೇವೆ. ನಾವು ಅಸಹಾಯಕರು ಎಂಬುದು ಸ್ಥಳೀಯ ಅಧಿಕಾರಿಗಳ ಅಳಲು. ಶುಲ್ಕ ವಿಧಿಸಿದ ತರುವಾಯ ಬೆಟ್ಟದ ವೀಕ್ಷಣೆಗೆ ಬರುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ, ಕೂಡಲೇ ಈ ನಿರ್ಧಾರವನ್ನು ಪುನರ್‌ಪರಿಶೀಲಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ಚೌಡಿಕಿ ಪದಗಾರರ ಕಲೆ - ಅರ್ಜಿ ಆಹ್ವಾನ : ಕೆಲವು ದೇವದಾಸಿಯರು ಇಂದೂ ಪರಂಪರಾಗತ ಚೌಡಿಕಿ ಪದಗಳ ನೆರವಿನಿಂದಲೇ ಜೀವನ ನಡೆಸುತ್ತಿದ್ದು, ಅಂತಹ ದೇವದಾಸಿ ಕಲಾವಿದರನ್ನು ಗುರುತಿಸಿ ಜೌಡಿಕಿ ಪದಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ರಾಜ್ಯ ಮಹಿಳಾ ಆಯೋಗದ ದೇವದಾಸಿಯರ ಪುನರ್ವಸತಿ ಸಮಾವೇಶದಲ್ಲಿ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಮಹಿಳಾ ಚೌಡಿಕೆ ಪದಗಾರರು ತಮ್ಮ ಹೆಸರು, ವಿಳಾಸವುಳ್ಳ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರ, ಬಳ್ಳಾರಿ ಇವರಿಗೆ ಫೆ.9ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications